ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶ್ ಚಾಲನೆ
ತರೀಕೆರೆ: ನಮ್ಮ ಗ್ರಾಮ ನಮ್ಮ ರಸ್ತೆ, ಎಸ್ಸಿಪಿ ವಿಶೇಷ ಯೋಜನೆ, ನಬಾರ್ಡ್ ಇತ್ಯಾದಿ ವಿವಿಧ ಯೋಜನೆಯಡಿ ಲಕ್ಕವಳ್ಳಿ ಮತ್ತು ಲಕ್ಕವಳ್ಳಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಶಾಸಕ ಡಿ.ಎಸ್. ಸುರೇಶ್ ರು. 11.50 ಕೋಟಿಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ, ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಲಕ್ಕವಳ್ಳಿ ಮತ್ತು ಲಕ್ಕವಳ್ಳಿ ಹೋಬಳಿಯ ಉಪ್ಪಾರಬೀರನಹಳ್ಳಿ, ಕೆಂಚಿಕೊಪ್ಪ, ಮುಡುಗೋಡು, ಮಾಳಿಕೊಪ್ಪ, ಗುಡ್ಡದಬೀರನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ರಸ್ತೆ ಡಾಂಬರೀಕರಣ, ಕುಡಿಯುವ ನೀರಿನ ಯೋಜನೆ, ಪೈಪ್ಲೈನ್ ಜೋಡಣೆ ಇತ್ಯಾದಿ ಅಭಿವೃದ್ಧಿ ಕಾಮಗಾರಿ ಕಾರ್ಯಗಳಿಗೆ ಶಾಸಕ ಡಿ.ಎಸ್. ಸುರೇಶ್ ಗುದ್ದಲಿಪೂಜೆ ನೆರವೇರಿಸಿದರು.
ಶಾಸಕ ಡಿ.ಎಸ್. ಸುರೇಶ್ ಅವರು ಗುಡ್ಡದಬೀರನಹಳ್ಳಿಯಲ್ಲಿ ಏರ್ಪಾಡಾಗಿದ್ದ ಸಮಾರಂಭದಲ್ಲಿ ಮಾತನಾಡಿ, ಸ್ವಾತಂತ್ರ್ಯ ಬಂದು 60 ವರ್ಷಗಳಾದರೂ ಈ ಭಾಗದಲ್ಲಿ ಜನರು ಓಡಾಡಲು ರಸ್ತೆ ನಿರ್ಮಾಣವಾಗಿರಲಿಲ್ಲ. ಸ್ವಲ್ಪ ದಿನಗಳ ಹಿಂದೆ ರು. 30 ಲಕ್ಷಗಳಲ್ಲಿ ರಸ್ತೆಗೆ ಮೆಟ್ಲಿಂಗ್ ಮತ್ತು ಸೇತುವೆ ನಿರ್ಮಾಣವಾಗಿತ್ತು. ಇದೀಗ ರು. 206 ಲಕ್ಷಗಳಲ್ಲಿ 8 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಬಹು ವರ್ಷಗಳ ಬೇಡಿಕೆ: ಲಕ್ಕವಳ್ಳಿಯನ್ನು ಸುವರ್ಣ ಗ್ರಾಮದ ಯೋಜನೆಗೆ ಸೇರಿಸಲಾಗಿದೆ. ಇತಿಹಾಸ ಪ್ರಸಿದ್ಧ ಸೋಂಪುರ ಗ್ರಾಮದ ಸೋಮೇಶ್ವರ ದೇವಾಲಯದಲ್ಲಿ ರು. 1 ಕೋಟಿ ವೆಚ್ಚದಲ್ಲಿ ಯಾತ್ರಿಕರ ನಿವಾಸ ನಿರ್ಮಾಣ ಇತ್ಯಾದಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಕೊಳ್ಳಲಾಗಿದೆ. ತಾಲೂಕಿನಲ್ಲಿ ಸಮುದಾಯ ಭವನ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಇತ್ಯಾದಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಗುಡ್ಡಗಾಡು ನಡುವೆ ಇರುವ ಈ ಗ್ರಾಮದ ರಸ್ತೆ ನಿರ್ಮಾಣ ಕಾರ್ಯ ಕೆಲವೇ ದಿವಸಗಳಲ್ಲಿ ಈಡೇರಿಕೆಯಾಗುತ್ತದೆಯ. ಈ ಭಾಗದಲ್ಲಿ ಮಳೆ ಜಾಸ್ತಿ. ಆದ್ದರಿಂದ ಶಾಶ್ವತವಾಗಿ ಉಳಿಯುವ ಕಾಮಗಾರಿ ನಿರ್ವಹಿಸಬೇಕು ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ದೀಪಾ ಉಮೇಶ್ ಮಾತನಾಡಿ, ತಾಲೂಕಿನಲ್ಲಿ ಎಲ್ಲ ಗ್ರಾಮಗಳನ್ನು ಮಾದರಿ ಹಳ್ಳಿಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಎಪಿಎಂಸಿ ಅಧ್ಯಕ್ಷ ವಿ. ಶಿವಕುಮಾರ್ ಮಾತನಾಡಿ, ಶಾಸಕರು ತಾಲೂಕಿನಾದ್ಯಂತ ಪಟ್ಟಣ, ಹೋಬಳಿ ಮತ್ತು ಹಳ್ಳಿ ಹೀಗೆ ಎಲ್ಲ ಕಡೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ವೆಂಕಟೇಶ್, ರಮೇಶ್ ಮಾತನಾಡಿದರು. ಲಕ್ಕವಳ್ಳಿ ಸಂಜೀವ್ಕುಮಾರ್, ಮಂಜುನಾಥ್, ಗ್ರಾಮಸ್ಥರು ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ರಮೇಶ್ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

