ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಪ್ರೇಮವಿವಾಹ
ತರೀಕೆರೆ: ಪ್ರೇಮ ವಿವಾಹದ ದೃಢೀಕರಣದ ಬಗ್ಗೆ ಮಾಜಿ ಶಾಸಕರೊಬ್ಬರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಲಿಂಗದಹಳ್ಳಿ ಹೋಬಳಿ ಸಂತವೇರಿ ಗ್ರಾಮದ ಎಕೋಬ್ (21) ಹಾಗೂ ಶೃತಿ (20) ಈಕೆಯನ್ನು ತರೀಕೆರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಸಿ ಪ್ರೇಮ ವಿವಾಹವನ್ನು ದೃಢೀಕರಣ ಮಾಡಿರುತ್ತಾರೆ. ಇದರ ನೇತೃತ್ವವನ್ನು ಮಾಜಿ ಶಾಸಕ ಬಿ.ಆರ್. ನೀಲಕಂಠಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ. ಕೃಷ್ಣಪ್ಪ ಮತ್ತು ಇತರರ ನೇತೃತ್ವದಲ್ಲಿ ವಿವಾಹ ಮಾಡಿಸಲಾಯಿತು ಎಂದು ತಿಳಿಸಿದ್ದಾರೆ.
ನಾಳೆ ಸೈಕಲ್ ಜಾಥಾ
ಚಿಕ್ಕಮಗಳೂರು: ನಗರದ ಐಡಿಎಸ್ಜಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳಿಂದ ಪರಿಸರ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸಲು ಫೆ.7ರಂದು ಸೈಕಲ್ ಜಾಥಾ ಹಾಗೂ ಚಾರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋವರ್ಸ್ ಲೀಡರ್ ಬಿ. ಯೋಗೀಶ್ ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ 10 ಗಂಟೆಗೆ ಕಾಲೇಜು ಆವರಣದಿಂದ ಪ್ರಾರಂಭಗೊಳ್ಳುವ ಸೈಕಲ್ ಜಾಥಾವನ್ನು ಜಿ.ಪಂ. ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಉದ್ಘಾಟಿಸುವರು. ಜಿಲ್ಲಾ ಆಯುಕ್ತ ಎ.ಎನ್. ಮಹೇಶ್, ಕಾಲೇಜು ಅಭಿವೃದ್ಧಿ ಅಧ್ಯಕ್ಷ ಎಚ್.ಡಿ. ತಮ್ಮಯ್ಯ ಮತ್ತು ಕಾರ್ಯಾಧ್ಯಕ್ಷ ಬಿ.ಎಚ್. ನರೇಂದ್ರ ಪೈ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಪ್ರಾಂಶುಪಾಲೆ ಡಾ. ಜರೀನಾ ಕೌಸರ್ ಅಧ್ಯಕ್ಷತೆ ವಹಿಸುವರು.
ಹನುಮಂತಪ್ಪ ವೃತ್ತದ ಮೂಲಕ ಕೈಮರದವರೆಗೂ ಸೈಕಲ್ ಜಾಥಾ ತೆರಳುವ ರೋವರ್ಸ್ ಮತ್ತು ರೇಂಜರ್ಸ್ಗಳು, ಚಾರಣದ ಮೂಲಕ ಮುಳ್ಳಯ್ಯನಗಿರಿ ಶಿಖರ ತಲುಪಿ ಅಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಲಿದ್ದಾರೆ.
ಪ್ರತಿಭಾ ಕಾರಂಜಿ
ನರಸಿಂಹರಾಜಪುರ: ಶೃಂಗೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಟ್ಟಣದ ಡಿಸಿಎಂಸಿ (ಶಾರದಾ ವಿದ್ಯಾಮಂದಿರ ) ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಜೋಮಿ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 4 ನೇ ತರಗತಿ ವಿದ್ಯಾರ್ಥಿ ಜೆಮಿನ್ ಮಾಡಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ. ವಿಶೇಷವೆಂದರೆ ಈ ಇಬ್ಬರು ಮಕ್ಕಳು ಅಕ್ಕ ಮತ್ತು ತಮ್ಮನಾಗಿದ್ದು ಸಂಸ್ಥೆ ಶಿಕ್ಷಕಿ ಮೇರಿ ಮತ್ತು ಎಂ.ವಿ. ಜೋನಿ ಮಕ್ಕಳಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

