ಅಲ್ಪಾವಧಿಯಲ್ಲಿ ಮಹಾನ್ ಸೇವೆ ಸಲ್ಲಿಸಿದ ಆದಿ ಶ್ರೀ
ಚಿಕ್ಕಮಗಳೂರು: ಅನ್ನ, ಅಕ್ಷರ, ಆರೋಗ್ಯ ಕ್ಷೇತ್ರಗಳ ಮೂಲಕ ಅತ್ಯಂತ ಅಲ್ಪಾವಧಿಯಲ್ಲಿ ಮಹಾನ್ ಸೇವೆ ಒದಗಿಸಿದ ಕೀರ್ತಿ ಬಾಲಗಂಗಾಧರನಾಥ ಶ್ರೀಗಳದ್ದು. ಇವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿ ದೇಶಕ್ಕೇ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಐ.ಎಂ. ಮಹೇಶ್ ಗೌಡ ಹೇಳಿದ್ದಾರೆ.
ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಒಕ್ಕಲಿಗರ ಸಂಘದಿಂದ ನಡೆದ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಉದ್ಘಾಟಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ನಗರದ ಎಐಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಜಗತ್ತಿನ ಮೂಲೆಮೂಲೆಯಲ್ಲೂ ಕೆಲಸ ಮಾಡಿ ಜಿಲ್ಲೆಗೆ ಗೌರವ ತಂದುಕೊಟ್ಟಿದ್ದಾರೆ ಎಂದರು.
ಸಮಸ್ಯೆಗೆ ಸ್ಪಂದನೆ: ಎಐಟಿ ಕಾಲೇಜಿನ ಪ್ರಾಂಶುಪಾಲ ಸುಬ್ರಾಯ ಮಾತನಾಡಿದರು.
ಮಾಜಿ ಶಾಸಕ ಐ.ಬಿ. ಶಂಕರ್ ಮಾತನಾಡಿ, ಒಂದು ಜನಾಂಗಕ್ಕೆ ಮಾತ್ರ ಗುರುವಾಗದೇ ಇಡೀ ಸಮುದಾಯಕ್ಕೆ ಮಾರ್ಗದರ್ಶಕರಾಗಿದ್ದರು. ನಗರದಲ್ಲಿ ತಾಂತ್ರಿಕ ಕಾಲೇಜು ಮತ್ತು ಕಲ್ಯಾಣ ಮಂಟಪ ನಿರ್ಮಿಸಿದ್ದಾರೆ ಎಂದರು.
ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ ಮಾತನಾಡಿದರು. ಸಂಘದ ಉಪಾಧ್ಯಕ್ಷರಾದ ಕನಕ, ನಿರ್ದೇಶಕರಾದ ನಾರಾಯಣ ಗೌಡ, ಕವೀಶ್, ರವಿ, ಗಂಧದ ಕೃಷ್ಣೇಗೌಡ, ಉತ್ತಮ್ ಗೌಡ, ಹಿಮಕೀರ್ತಿ, ಡಾ. ವಿಜಯಕುಮಾರ್, ಮಹಿಳಾ ಜಾಗೃತಿ ಸಂಘದ ಅಧ್ಯಕ್ಷೆ ಗೌರಮ್ಮ ಬಸವೇಗೌಡ, ಕಾಂಗ್ರೆಸ್ ಮುಖಂಡ ಟಿ.ಡಿ. ರಾಜೇಗೌಡ, ಮಹಿಳಾ ಸಂಘದ ಅಧ್ಯಕ್ಷೆ ರಾಜಶ್ರೀ, ರಾಮೇಗೌಡ, ಸಣ್ಣತಮ್ಮೇಗೌಡ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

