ಎಸ್ಸೆಸ್ಸೆಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತ ತರಬೇತಿ
ತರೀಕೆರೆ: ವಿದ್ಯಾರ್ಥಿಗಳು ಉತ್ತಮ ವ್ಯಾಸಂಗ ಮಾಡುವುದರಿಂದ ಮುಂದಿನ ಭವಿಷ್ಯ ಚೆನ್ನಾಗಿರುತ್ತದೆ ಎಂದು ರಾಜಿನಾಮೆ ನೀಡಿರುವ ಶಾಸಕ ಡಿ.ಎಸ್. ಸುರೇಶ್ ತಿಳಿಸಿದ್ದಾರೆ.
ಬುಧವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಪಟ್ಟಣದ ಎಂ.ಜಿ. ಹಾಲ್ನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ಎದುರಿಸುವ ಕುರಿತು ಏರ್ಪಾಡಾಗಿದ್ದ ತರಬೇತಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಬಗ್ಗೆ ಸರ್ಕಾರ ಕೂಡ ಸಂಪನ್ಮೂಲ ವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದೆ. ಇಂದು ಸ್ಪರ್ಧಾತ್ಮಕ ಸಮಯವಾದುದರಿಂದ ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಉತ್ತಮ ಫಲಿತಾಂಶ ಪಡೆದು ಫೋಷಕರಿಗೆ ಮತ್ತು ಊರಿಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ಆತ್ಮಸ್ಥೈರ್ಯ ಹೆಚ್ಚುತ್ತದೆ: ಪುರಸಭೆ ಅಧ್ಯಕ್ಷ ಎಂ.ನರೇಂದ್ರ ಮಾತನಾಡಿ, ಪರೀಕ್ಷೆ ಎದುರಿಸುವ ಕುರಿತು ಮಾರ್ಗದರ್ಶನದಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುತ್ತದೆ, ಹೊಸ ಚೈತನ್ಯವನ್ನು ತುಂಬುತ್ತದೆ, ತರಬೇತಿಯ ಅವಕಾಶವನ್ನು ಉಪಯೋಗಿಸಿಕೊಂಡು ಉತ್ತಮ ಫಲಿತಾಂಶವನ್ನು ತನ್ನಿ ಎಂದು ಕಿವಿಮಾತು ಹೇಳಿದರು.
ಅಂತಾರಾಷ್ಟ್ರೀಯ ವ್ಯಕ್ತಿತ್ವ ವಿಕಸನ ತರಬೇತಿದಾರ ಚೇತನ್ ರಾಮ್ ಮಾತನಾಡಿ, ಆಸೆ ಕನಸು, ಸತ್ಯವೇ ವಾಸ್ತವ್ಯ. ಏನು ಆಧ್ಯಯನ ಮಾಡಬೇಕು, ಹೇಗೆ ಅಧ್ಯಯನ ಮಾಡಬೇಕು, ಹೇಗೆ ಪರೀಕ್ಷೆಯನ್ನು ಎಂಬುದನ್ನು ಚೆನ್ನಾಗಿ ಮನನ ಮಾಡಿಕೊಳ್ಳಬೇಕು. ಪರೀಕ್ಷೆ ಒಂದು ಸಂಭ್ರಮದ ಹಬ್ಬ ಎಂದು ಅಭಿಪ್ರಾಯಪಟ್ಟರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್. ಪರಮೇಶ್ವರಪ್ಪ, ಸಿಡಿಪಿಒ ಶ್ರೀಧರ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕಾಂತರಾಜ್, ಜಯ್ಯಪ್ಪ, ನಾಗರಾಜ್ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

