ಚಿಕ್ಕಮಗಳೂರು

ರಂಗಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ಎಸ್ಪಿ

Published On :

ಚಿಕ್ಕಮಗಳೂರು: ನಾಟಕ ಕಂಪನಿಗಳಲ್ಲಿ ಕೆಲಸ ಮಾಡುವ ನೂರಾರು ಪ್ರತಿಭಾವಂತ ಕಲಾವಿದರ ಜೀವನ ಅಡಗಿರುತ್ತದೆ, ಇದನ್ನರಿತು ಸಂಸ್ಕೃತಿ ಉಳಿಸುವ ಜೊತೆಗೆ ಅವರ ಜೀವನಕ್ಕೂ ಪ್ರೋತ್ಸಾಹ ನೀಡುವುದು ನಮ್ಮ ಜವಾಬ್ದಾರಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಶಶಿಕುಮಾರ್ ಹೇಳಿದ್ದಾರೆ.
ನಗರದ ಕುವೆಂಪು ಕಲಾಮಂದಿರದಲ್ಲಿ ವೀರೇಶ್ವರ ನಾಟ್ಯ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಜಮೀನ್ದಾರರ ಮನೆತನ ನಾಟಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸಿನಿಮಾ ಮತ್ತು ಧಾರಾವಾಹಿಗಳಿಗಿಂತ ಅದ್ಭುತ ಪ್ರತಿಭೆಗಳು ರಂಗಭೂಮಿಯಲ್ಲಿದ್ದಾರೆ. ಇಂತಹ ಪ್ರಾಚೀನ ಕಲೆಗಳನ್ನು ಉಳಿಸಿ ಪೋಷಿಸುವ ಕೆಲಸ ಸರ್ಕಾರ ಮಾಡಬೇಕಿದೆ ಎಂದ ಅವರು, ಉತ್ತರ ಕರ್ನಾಟಕದಿಂದ ಇಲ್ಲಿಗೆ ಬಂದು ಕಲಾಪ್ರಯೋಗ ಮಾಡುತ್ತಿರುವ ಕಲಾವಿದರಿಗೆ ಮಲೆನಾಡಿಗರು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಪ್ರೋತ್ಸಾಹ ಅಗತ್ಯ: ಸರ್ಕಾರಿ ಅಭಿಯೋಜಕ ಕೆ.ಕೆ. ಕುಲಕರ್ಣಿ ಮಾತನಾಡಿ, ದಕ್ಷಿಣ ಪ್ರಾಂತ್ಯದಲ್ಲಿ ಟಿ.ವಿ. ಮಾಧ್ಯಮಕ್ಕೆ ಹೊಂದಿಕೊಂಡಿರುವುದರಿಂದ ನಾಟಕದ ಅಭಿರುಚಿ ಕಡಿಮೆ. ರಂಗಭೂಮಿ ಕಲೆಯನ್ನು ವೃತ್ತಿಯಾಗಿ ಉಳಿಸಿಕೊಂಡು ಸಂಸಾರದ ಭಾರ ನಿಭಾಯಿಸುತ್ತಿರುವವರಿಗೆ ಪ್ರೋತ್ಸಾಹ ಅಗತ್ಯ ಎಂದರು.
ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿದರು.
ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಕೆ. ಸುಬ್ಬರಾಯ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಕೆ. ಹಳ್ಳಿ, ಎಂ.ಎಸ್. ಚಂದ್ರಪ್ಪ, ಪ್ರಸನ್ನಕುಮಾರ್, ವ್ಯವಸ್ಥಾಪಕರಾದ ಮೀನಾಕ್ಷಿ, ಲಕ್ಷ್ಮಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.