ವಿದ್ಯುತ್ ಗುತ್ತಿಗೆದಾರರ ಭವನ ನಿರ್ಮಾಣ
ಕಡೂರು: ರಾಜ್ಯ ವಿದ್ಯುತ್ ಗುತ್ತಿಗೆದಾರರ ಕ್ಷೇಮಾಭಿವೃದ್ಧಿಗೆ ಚಿಂತನೆ ನಡೆಸುವ ಮೂಲಕ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿದ್ಯುತ್ ಗುತ್ತಿಗೆದಾರರ ಭವನಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಎಸ್.ಎನ್. ಕೃಷ್ಣ ಹೇಳಿದರು.
ಪಟ್ಟಣದ ಮರವಂಜಿ ವೃತ್ತದ ಬಳಿ ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಕಾರ್ಯಾಲ ಉಧ್ಘಾಟಿಸಿ ಮಾತನಾಡಿ, ಕಳೆದ ನಾಲ್ಕು ದಶಕಗಳ ಹಿಂದೆಯೇ ಬೆಂಗಳೂರಿನಲ್ಲಿ ವಿದ್ಯುತ್ ಗುತ್ತಿಗೆದಾರರ ಸಂಘ ಸ್ಥಾಪಿತವಾಗಿ ಗುತ್ತಿಗೆದಾರರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ.
ರಾಜ್ಯಾದ್ಯಂತ ಸಂಘಗಳನ್ನು ತೆರೆದು ಅವರ ಶ್ರೇಯೋಭಿವೃದ್ಧಿಗೆ ರಾಜ್ಯ ಸಂಘ ಶ್ರಮಿಸುತ್ತಿದೆ. ಭವನಗಳ ನಿರ್ಮಾಣಕ್ಕೆ ರಾಜ್ಯ ಸಂಘದಿಂದ ತಲಾ 2.50 ಲಕ್ಷರು. ಅನುದಾನ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಾಸನದಲ್ಲಿ ಭವನ ನಿರ್ಮಾಣಾವಾಗುತ್ತಿದೆ ಎಂದರು.
ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿಯೂ ಭವನ ನಿರ್ಮಾಣ ಮಾಡಲು ನಿವೇಶನ ನೋಡಲಾಗಿದ್ದು ಶೀಘ್ರದಲ್ಲಿಯೆ ಭವನ ನಿರ್ಮಾಣ ಮಾಡಲಾಗುವುದು.
ವಿದ್ಯುತ್ ಗುತ್ತಿಗೆದಾರರಿಗೆ ವಿದ್ಯುತ್ ಇಲಾಖೆಯಿಂದ ಕೆಲಸದಲ್ಲಿ ವಿಳಂಬ, ಬರಬೇಕಾಗಿರುವ ಬಾಕಿ, ಟೆಂಡರ್ ಕುರಿತು ಉಂಟಾಗುವ ಸಮಸ್ಯೆಗಳ ಬಗೆಹರಿಸುವಿಕೆ ಹಾಗೂ ಗ್ರಾಹಕರಿಗೆ ತೊಂದರೆಯಾಗದಂತೆ ಸಂಘ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಮೂದಲ ಹಂತದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಭವನಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಎರಡನೇ ಹಂತದಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ಗುತ್ತಿಗೆದಾರರ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಭವನಗಳ ನಿರ್ಮಾಣಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣ ಹೇಳಿದರು.
ಕೇಂದ್ರ ಸಂಘದ ಹೋರಾಟ ಸಮಿತಿ ಅಧ್ಯಕ್ಷ ವೈ.ಎಚ್. ಆನಂದ್, ಜಿಲ್ಲಾಧ್ಯಕ್ಷ ಟಿ.ಡಿ. ಭೋಜೇಗೌಡ, ತಾಲೂಕು ಅಧ್ಯಕ್ಷ ಎಂ. ರಮೇಶ್, ಕಾರ್ಯದರ್ಶಿ ಮಧು, ಉಪಾಧ್ಯಕ್ಷ ಪಿ.ಆರ್. ಲೋಕೇಶ್, ಎಂ.ಆರ್. ವೀರೇಶ್, ಸಹ ಕಾರ್ಯದರ್ಶಿ ಉದಯ್, ನಾಗರಾಜ್, ನಜೀರ್, ಮಹೇಶ್ವರಪ್ಪ, ಏಜಾಜ್, ಟಿ. ರಾಜು, ಚಂದ್ರು ಇದ್ದರು ಮೊದಲಾದವರು ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

