ಚಿಕ್ಕಮಗಳೂರು

ಆಸ್ಪತ್ರೆ ಕಟ್ಟಡ ಕಾಮಗಾರಿ ಚುರುಕುಗೊಳಿಸಲು ಸೂಚನೆ

Published On :

ಕೊಪ್ಪ: ತಾಲೂಕಿನ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆ ಆಸ್ಪತ್ರೆಯಾಗಿ ಮೇಲು ದರ್ಜೆಗೆ ಏರಿಸುವ ಸಲುವಾಗಿ ರು. 3.30 ಕೋಟಿ ವೆಚ್ಚದಲ್ಲಿ ನಿರ್ಮಾಣಮಾಡುತ್ತಿರುವ ಹೆಚ್ಚುವರಿ ಕಟ್ಟಡದ ಕಾಮಗಾರಿ ನಡೆಯುವ ಸ್ಥಳಕ್ಕೆ ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿ, ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕಟ್ಟಡದ ಮೇಲ್ಚಾವಣಿಗೆ ಕಾಂಕ್ರೀಟ್ ಹಾಕಿಲ್ಲ. ಇನ್ನೂ ಮೂರು ತಿಂಗಳಲ್ಲಿ ಮಳೆಗಾಲ ಪ್ರಾರಂಭವಾಗುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೀವ್ರವಾದ ತೊಂದರೆಯಾಗುತ್ತದೆ. ಅದ್ದರಿಂದ ಗುಣಮಟ್ಟದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿಮುಗಿಸಿ ಎಂದು ಎಂಜಿನೀಯರ್‌ಗಳಿಗೆ ಸೂಚನೆ ನೀಡಿದರು.
ಈ ಆರೋಪವನ್ನು ನಿರಾಕರಿಸಿದ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಾಮಚಂದ್ರಪ್ಪ, ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳನ್ನು ಸಮಾನ ರೀತಿಯಲ್ಲಿ ಚಿಕಿತ್ಸೆಯನ್ನು ನೀಡುತ್ತಿದ್ದೇವೆ ಎಂದರು.
ಭಿನ್ನಾಭಿಪ್ರಯ ಬಿಡಿ: ಜಿಪಂ ಅಧ್ಯಕ್ಷೇ ರೇಖಾ ಹುಲಿಯಪ್ಪಗೌಡ ಮಾತನಾಡಿ, ಆಸ್ಪತ್ರೆಯಲ್ಲಿ ವೈದ್ಯರು ಭಿನ್ನಾಭಿಪ್ರಾಯಗಳನ್ನು ಬಿಟ್ಟು ರೋಗಿಗಳಿಗೆ ಉತ್ತಮ ಸೇವೆಯನ್ನು ನೀಡುವುದರ ಮೂಲಕ ಆಸ್ಪತ್ರೆಯ ಬಗ್ಗೆ ಒಳ್ಳೆಯ ಆಭಿಪ್ರಾಯ ಮೂಡುವಂತೆ ಕೆಲಸಮಾಡಿ ಎಂದರು.  
ಜಿಪಂ ಸದಸ್ಯರಾದ ಅನ್ನಪೂರ್ಣ, ಸುಚಿತ್ರ, ರವೀಂದ್ರ, ತಾಪಂ ಅಧ್ಯಕ್ಷೇ ಪದ್ಮವತಿ ರಮೇಶ್, ಉಪಾಧ್ಯಕ್ಷ ರಮೇಶ್, ಸದಸ್ಯರಾದ ಪೂರ್ಣಚಂದ್ರ, ಜಿಲ್ಲಾ ವೈದ್ಯಾಧಿಕಾರಿ, ತಾಲೂಕು ವೈದ್ಯಾಧಿಕಾರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.