ಚಿಕ್ಕಮಗಳೂರು

ಗುಡುಗು ಸಹಿತ ಭಾರಿ ಮಳೆ

Published On :

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ.
ಬಿಸಿಲಿನ ಝಳದಿಂದ ತತ್ತರಿಸಿದ್ದ ಜನರಿಗೆ ಈ ಮಳೆ ತಂಪೆರೆದಿದೆ.
ಬರಪೀಡಿತ ತರೀಕೆರೆ, ಕಡೂರು, ಚಿಕ್ಕಮಗಳೂರು ತಾಲೂಕುಗಳು ಸೇರಿದಂತೆ ಮಲೆನಾಡಿನಲ್ಲೂ ಮಳೆ ಬಂದಿದೆ. ತರೀಕೆರೆ ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ತುಂತುರು ಮಳೆಯಾಗಿದ್ದರೆ, ಅಂರ್ತಜಲ ಮಟ್ಟ ಕುಸಿದು, ಕುಡಿಯುವ ನೀರಿನ ಹಾಹಾಕಾರದಿಂದ ನಲುಗಿರುವ ಕಡೂರು, ಬೀರೂರು ಪಟ್ಟಣಗಳು ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಗುಡುಗು ಸಹಿತ ಭಾರಿ ಮಳೆಯಾಗಿದೆ.
ಚಿಕ್ಕಮಗಳೂರು ನಗರ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಸಂಜೆ 4.30ರ ವೇಳೆಗೆ ಆರಂಭವಾದ ಮಳೆ ಸಂಜೆ 6.30ರ ವರೆಗೆ ಸುರಿಯಿತು. ತಗ್ಗಿನ ಪ್ರದೇಶಗಳು ನೀರಿನಿಂದ ತುಂಬಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತ್ತು. ರಸ್ತೆ ಅಗಲೀಕರಣದ ಕಾಮಗಾರಿಗೂ ತೊಂದರೆಯಾಯಿತು.
ಮೂಡಿಗೆರೆ, ಕೊಪ್ಪ, ಶೃಂಗೇರಿ ಹಾಗೂ ಎನ್.ಆರ್. ಪುರ ಪಟ್ಟಣಗಳಲ್ಲಿ ಹಾಗೂ ಜಯಪುರ, ಬಾಳೆಹೊನ್ನೂರಿನಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇತ್ತಾದರೂ ಮಳೆ ಮಾತ್ರ ಬಂದಿರಲಿಲ್ಲ. ಶನಿವಾರವೂ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ವೇಳೆಗೆ ಜಿಲ್ಲೆಯಾದ್ಯಂತ ಏಕ ಕಾಲದಲ್ಲಿ ಮಳೆ ಬಂದಿದ್ದು, ಸಂಜೆಯ ನಂತರದಲ್ಲಿ ವಾತಾವರಣ ತಂಪಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.