ದಾಸ ಶ್ರೇಷ್ಠರ ಆರಾಧನಾ ಮಹೋತ್ಸವ
ಚಿಕ್ಕಮಗಳೂರು: ಕರ್ನಾಟಕ ಸಂಗೀತದ ಪಿತಾಮಹ ಸಂತ ಶ್ರೀ ತ್ಯಾಗರಾಜರು, ದಾಸ ಶ್ರೇಷ್ಠರಾದ ಶ್ರೀ ಪುರಂದರ ದಾಸರು ಮತ್ತು ಕನಕದಾಸರ ಆರಾಧನಾ ಮಹೋತ್ಸವ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಹಿರೇಮಗಳೂರಿನ ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಾಲಯದಲ್ಲಿ ಭಾನುವಾರ ಶ್ರದ್ದಾಭಕ್ತಿಯಿಂದ ನಡೆಯಿತು.
ನಗರ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಸಂಗೀತಗಾರು ಆರಾಧನೆ ಅಂಗವಾಗಿ ದೇವಾಲಯದ ಆವರಣದಲ್ಲಿ ಶ್ರೀ ತ್ಯಾಗರಾಜರು, ಪುರಂದರದಾಸರು ಮತ್ತು ಕನಕದಾಸರ ಭಾವಚಿತ್ರಗಳೊಂದಿಗೆ ಪಿಳ್ಳಾರಿಗೀತೆ ಮತ್ತು ಸಂಪ್ರದಾಯಬದ್ದ ಕೃತಿಗಳನ್ನು ಹಾಡಿದರು.
ನಂತರ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರ ನೇತೃತ್ವದಲ್ಲಿ ಶ್ರೀ ಕೋದಂಡರಾಮಚಂದ್ರಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ ಆರಂಭಗೊಳ್ಳುತ್ತಿದ್ದಂತೆ ಮುಂಭಾಗದಲ್ಲಿ ಸಂಗೀತಗಾರರು ಸಾಮೂಹಿಕವಾಗಿ ಶ್ರೀ ತ್ಯಾಗರಾಜರ ಪಂಚರತ್ನ ಕೃತಿಗಳನ್ನು ಹಾಗೂ ಪುರಂದರದಾಸರು ಮತ್ತು ಕನಕದಾಸರ ಕೃತಿಗಳನ್ನು ಹಾಡಿದರು.
ಸಂಗೀತ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಸಾಂಸ್ಕೃತಿಕ ಸಂಘದ ವತಿಯಿಂದ ಪ್ರೋತ್ಸಾಹಧನ ಮತ್ತು ಬಹುಮಾನ ವಿತರಿಸಲಾಯಿತು.
ಸಾರ್ವಜನಿಕರ ಅನ್ನಸಂತರ್ಪಣೆ ಜರುಗಿತು. ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎ.ಆರ್. ಶೇಷಾದ್ರಿ, ಕಾರ್ಯದರ್ಶಿ ಉಜ್ವಲ್ ಡಿ. ಪಡುಬಿದ್ರಿ. ನಿರ್ದೇಶಕರಾದ ಬಿ.ಆರ್. ರವಿಂದ್ರ, ಗಿರಿಧರ್ ಯತಿಶ್, ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚೂಡಾನಾಥ ಅಯ್ಯರ್, ವಿದ್ವಾನ್ ಬಿ.ಎನ್.ಎಸ್. ಮುರಳಿ ಮುಂತಾದವರು ಮಹೋತ್ಸವದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

