ಮದಗದ ಕೆರೆಯಿಂದ ನೀರು ಬಿಡಿ
ಚಿಕ್ಕಮಗಳೂರು: ಮದಗದ ಕೆರೆಯಿಂದ ಕಡೂರು ಪಟ್ಟಣಕ್ಕೆ ನೀರು ಹಾಯಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಕಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯವರು ಮನವಿ ಸಲ್ಲಿಸಿ ಮದಗದ ಕೆರೆಯಿಂದ ಕೊಂಕನಹಳ್ಳಿ ಕೆರೆಗೆ ನೀರು ಹರಿಸಿ ಅಲ್ಲಿಂದ ಕಂಸಾಗರದ ಕಾಲುವೆ ಮೂಲಕ ಚಿಕ್ಕಪಟ್ಟಣಗೆರೆ ಕೆರೆಗೆ ಅಲ್ಲಿಂದ ತಂಗಲಿ ಹಳ್ಳದ ಮೂಲಕ ಪುರಸಭೆಯ ವೇದಾ ಪಂಪ್‌ಹೌಸ್ ಬ್ಯಾರೇಜ್‌ಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.
ಹಾಹಾಕಾರ: ಕಡೂರು ಪಟ್ಟಣದಲ್ಲಿ ಸುಮಾರು 40,000 ಜನಸಂಖ್ಯೆ ಇದ್ದು. ಕುಡಿಯುವ ನೀರಿನ ಹಾಹಾಕಾರ ಪ್ರಾರಂಭವಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಎಲ್ಲೆ ಕೊಳವೆ ಬಾವಿ ತೆಗೆಸಿದರು ಸಮರ್ಪಕವಾಗಿ ನೀರು ಬರುತ್ತಿಲ್ಲ. ಅಲ್ಪಸ್ವಲ್ಪ ಬರುವ ನೀರು ಕಲುಷಿತವಾಗಿರುತ್ತದೆ. ಕುಡಿಯಲು ಯೋಗ್ಯವಾಗಿಲ್ಲ ಎಂದು ಹೇಳಿದ್ದಾರೆ.
ಜನ ಮತ್ತು ಜಾನುವಾರುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕುಡಿಯುವ ನೀರು ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಕಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿಯ ಅಧ್ಯಕ್ಷ ಚಂದ್ರಮೌಳಿ, ಜಿಪಂ ಮಾಜಿ ಅಧ್ಯಕ್ಷ ಕೆ.ಎಂ. ಕೆಂಪರಾಜ್. ಕೆ.ಎಂ. ವಿನಾಯಕ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

