ನಾಳೆ ಯಕ್ಷಗಾನ ಪ್ರದರ್ಶನ
ಶೃಂಗೇರಿ: ಕಾಳಿಂಗ ನಾವಡ ಪ್ರತಿಷ್ಠಾನ ಟ್ರಸ್ಟ್ ಆಶ್ರಯದಲ್ಲಿ ಪಟ್ಟಣದ ಗಾಂಧಿ ಮೈದಾನದಲ್ಲಿ ಬುಧವಾರ ಪೆರ್ಡೂರು ಮೇಳದವರಿಂದ ಚೂಡಾಮಣಿ ಗದಾಯುದ್ದ ದ್ರೌಪದಿ ಪ್ರತಾಪ ಎಂಬ ಯಕ್ಷಗಾನ ಕಥಾಪ್ರಸಂಗ ಅಭಿನಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗ್ಡೆಯರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಟಿ.ಎಲ್. ಉಮೇಶ್, ಟಿ.ಡಿ. ರಾಜೇಗೌಡ, ಟಿ.ಕೆ. ಪರಾಶರ, ಗಜಾನನ ಎಂ. ಭಟ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಗಣಪತಿ ಕಟ್ಟೆ ಬಳಿ ಕಾರುಗಳ ಡಿಕ್ಕಿ
ಶೃಂಗೇರಿ: ಮಂಗಳೂರು ಶಿವಮೊಗ್ಗ ರಾ.ಹೆ.1ರು. ರ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಗಣಪತಿ ಕಟ್ಟೆ ಎಂಬಲ್ಲಿ ಕಾರ್‌ಗಳೆರೆಡು ಪರಸ್ಪರ ಡಿಕ್ಕಿ ಹೊಡೆದ ಘಟನೆ ಭಾನುವಾರ ರಾತ್ರಿ ನಡೆದಿದೆ. ಕಾರ್‌ಗಳು ಜಖಂಗೊಂಡಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಗಿದ್ದಾರೆ.
ಅನಿಯಮಿತ ವಿದ್ಯುತ್ ಕಡಿತಕ್ಕೆ ವಿರೋಧ
ಶೃಂಗೇರಿ: ತಾಲೂಕಿನಾದ್ಯಂತ ಕಳೆದ ಕೆಲದಿನಗಳಿಂದ ಅನಿಯಮಿತ ವಿದ್ಯುತ್ ಕಡಿತ ಮಾಡುತ್ತಿರುವುದನ್ನು ತಾಲೂಕು ಜಯ ಕರ್ನಾಟಕ ಸಂಘಟನೆ ವಿರೋಧಿಸಿದೆ.
ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಪಾಳಿಯಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತಿತ್ತು. ಆದರೆ ಕೆಲ ದಿನಗಳಲ್ಲಿ ನಿಯಮಿತ ವಿದ್ಯುತ್ ಕಡಿತದ ಅವಧಿ ಹೊರತು ಪಡಿಸಿ ಉಳಿದ ಅವಧಿಯಲ್ಲಿಯೂ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ, ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ಇದೇ ರೀತಿ ಮುಂದುವರೆದಲ್ಲಿ ಸಂಘಟನೆ ಹೋರಾಟ ನಡೆಸಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಪಾಧ್ಯರು ದೇಶ ಕಂಡ ವಿದ್ವಾಂಸರು
ತರೀಕೆರೆ: ಪಂಡಿತ ದೀನದಯಾಳ್ ಉಪಾಧ್ಯ ದೇಶ ಕಂಡ ಅತ್ಯಂತ ದೊಡ್ಡ ವಿದ್ವಾಂಸರಾಗಿದ್ದರು ಎಂದು ಮ್ಯಾಮ್‌ಕೋಸ್ ನಿರ್ದೇಶಕ ಆರ್. ದೇವಾನಂದ್ ತಿಳಿಸಿದ್ದಾರೆ.
ಬಿಜೆಪಿ ಏರ್ಪಡಿಸಿದ್ದ ಪಂಡಿತ ದೀನ ದಯಾಳು ಉಪಾಧ್ಯ ಬಲಿದಾನ ದಿನದ ಸಮಾರಂಭದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಬಿಜೆಪಿ ತಾಲೂಕು ಕಾರ್ಯದರ್ಶಿ ರವಿಶಂಕರ್ ಮಾತನಾಡಿದರು. ನಾಗರತ್ನ ನಾಗಭೂಷಣ್, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಅವಿನಾಶ್, ಪುರಸಭಾ ಸದಸ್ಯ ಟಿ.ಜಿ. ಸದಾನಂದ್, ಕುಮಾರ್ ಎಪಿಎಂಸಿ ಸದಸ್ಯ ದೇವರಾಜ್, ರಘು ಪಕ್ಷದ ಕಾರ್ಯಕರ್ತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

