ಭೂಕಬಳಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಶೃಂಗೇರಿ: ಪಟ್ಟಣದ ತಾಲೂಕು ಕಚೇರಿ ಎದುರು ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ನ್ಯಾಯಾಲಯ ಕಟ್ಟಡದ ಬಳಿ ಸೇರಿದಂತೆ ತಾಲೂಕಿನ ಕೆಲವೆಡೆ ನಡೆಯುತ್ತಿರುವ ಭೂಕಬಳಿಕೆ ವಿರುದ್ಧ ಪ್ರತಿಭಟನೆ ನಡೆಸಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಕೆ. ದಿನೇಶ್ ಹೆಗ್ಡೆ, ತಾಲೂಕಿನ ಕೆಲವೆಡೆ ಭೂ ಕಬಳಿಕೆ ನಡೆಯುತ್ತಿದೆ. ತಾಲೂಕು ಕಚೇರಿಗೆ ಮಂಜೂರಾದ 4.ರು.ರು. ಎಕರೆ ವಿಸ್ತೀರ್ಣದ ಭೂಮಿ ಪಿಡಬ್ಲುಡಿ ಹೆಸರಿನಲ್ಲಿದ್ದು, ಈ ಜಾಗವನ್ನು ಕಬಳಿಸಲಾಗಿದೆ. ಅಲ್ಲದೇ ಕೆಲವೆಡೆ ಬೆನಾಮಿ ಹೆಸರಿನಲ್ಲಿ ಎಕರೆಗಟ್ಟೆಲೇ ಭೂಮಿ ಕಬಳಿಸಿಸಲಾಗಿದೆ.
ಆಡಳಿತ ಪಕ್ಷದ ಪ್ರಮುಖರು ಭೂಗಳ್ಳರಿಗೆ ಸಹಕರಿಸಿ ಷಾಮಿಲಾಗಿದ್ದಾರೆ. ತಾಲೂಕು ಕಚೇರಿಯ ಗುಡ್ಡವನ್ನು ರಾತ್ರೋ ರಾತ್ರಿ ಅಗೆಯುವ ಮೂಲಕ ಗುಡ್ಡದ ಮೇಲಿರುವ ಕಟ್ಟಡಗಳ ಅಸ್ತಿತ್ವವನ್ನೇ ಅಲುಗಾಡಿಸಲು ಹೊರಟಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ತಡೆಯಾಜ್ಞೆ ನೀಡಿದ್ದರಿಂದ ಅವರನ್ನು ರಾಜಕೀಯ ಪ್ರಭಾವ ಬಳಸಿ ಕೂಡಲೇ ವರ್ಗಾವಣೆ ಮಾಡಲಾಗಿದೆ. ಕೂಡಲೇ ಇಂತಹ ಕೃತ್ಯ ಎಸಗಿರುವ ಭೂಗಳ್ಳರ ವಿರುದ್ಧ ಕಾನೂನು ಕ್ರಮ ಜರುಗಿಸಿ, ತಾಲೂಕು ಕಚೇರಿ ಜಾಗವನ್ನು ಉಳಿಸಬೇಕೆಂದು ಅವರು ಆಗ್ರಹಿಸಿದರು.
ತಾಪಂ ಸದಸ್ಯ ನಟರಾಜ್ ಮಾತನಾಡಿ, ಈ ಬಗ್ಗೆ ಕೂಡಲೇ ಕ್ರಮ ತೆಗೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಕೊಪ್ಪ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಶೋಬಿತ್ ಮಾತನಾಡಿದರು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ತಹಸೀಲ್ದಾರ್‌ಗೆ ಮನವಿ ಸಲ್ಲಿಸುವಾಗ ಮಾತಿನ ಚಕಮಕಿ ನಡೆಯಿತು.
ಪರಿಸ್ಥಿತಿ ವಿಕೋಪಕ್ಕೆ ಹೋಗಿ ತಹಸೀಲ್ದಾರ್ ಕೃತ್ಯದಲ್ಲಿ ಷಾಮಿಲಾಗಿದ್ದಾರೆ ಎಂದು ಪ್ರತಿಭಟನಾ ಕಾರರು ಘೋಷಣೆ ಕೂಗಿದರು. ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಯುವಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಉಮೇಶ್, ಶಿವಮೂರ್ತಿ, ಬಾಳೆಮನೆ ನಟರಾಜ್, ಗೀತ ಶ್ರೀನಿವಾಸ್ ನಾಯಕ್, ಅಸ್ಗರ್ ಅಲಿ ಖಾನ್, ರಫಿಕ್ ಅಹಮದ್, ಮಂಜುಳಾ ಜಯಮೂರ್ತಿ, ಎಸ್.ಕೆ. ಸತೀಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

