ಚಿಕ್ಕಮಗಳೂರು

ಡಾ. ರಾಜ್ ವೇದಿಕೆಯ 30ನೇ ವಾರ್ಷಿಕೋತ್ಸವ

Published On :

ಕಡೂರು: ತೀವ್ರ ಬರದಿಂದಾಗಿ ನೀರಿನ ಸಮಸ್ಯೆ ಎದುರಿಸುತ್ತಿರುವ ತಾಲೂಕು ಸೇರಿದಂತೆ ಬೀರೂರು ಪಟ್ಟಣಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕುರಿತು ಸಂಘ ಸಂಸ್ಥೆಗಳು ಹೋರಾಟ ಮಾಡುವ ಮೂಲಕ ತಮ್ಮ ಕೈಲಾದ ಮಟ್ಟಿಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್ ಕಿವಿಮಾತು ಹೇಳಿದರು.
ಪಟ್ಟಣದ ಎಂಆರ್‌ಎಂ ಬಯಲು ರಂಗಮಂದಿರದಲ್ಲಿ ನಡೆದ ಕನ್ನಡ ಕಣ್ಮಣಿ ಡಾ. ರಾಜ್‌ಕುಮಾರ್ ವೇದಿಕೆಯ 30ನೇ ವಾರ್ಷಿಕೋತ್ಸವ ಹಾಗೂ ಕಡೂರಿನಿಂದ ಉಪ ವಿಭಾಗಾಧಿಕಾರಿಯಾಗಿ ಬಡ್ತಿ ಹೊಂದಿದ ಬಿ.ಆರ್. ರೂಪ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಸಂಘ ಸಂಸ್ಥೆಗಳು ಕೇವಲ ಸಭೆ ಸಮಾರಂಭಗಳಿಗೆ ಮೀಸಲಾಗದೆ ಎಚ್ಚೆತ್ತುಕೊಂಡು ಒಂದು ಸಮಸ್ಯೆಯ ಕುರಿತು ಜನರ ಪರವಾಗಿ ಕೆಲಸ ಮಾಡಿದಾಗ ಮಾತ್ರ ಆ ಸಂಘದ ದ್ಯೇಯೋದ್ದೇಶ ಈಡೇರಲು ಸಾಧ್ಯ ಎಂದು ಹೇಳಿದರು.
ಬಡ್ತಿ ಹೊಂದಿ ವರ್ಗಾವಣೆಯಾಗಿರುವ ರೂಪರವರು ದಕ್ಷ ಅಧಿಕಾರಿಯಾಗಿ ಕೆಲಸ ನಿರ್ವಹಿಸಿರುವ ಅವರ ಸೇವೆಗೆ ಪುರಸ್ಕಾರ ನೀಡುತ್ತಿರುವುದು ಸಂತಸದ ಸಂಗತಿ ಎಂದರು.
ಅತಿಥಿಗಳಾಗಿದ್ದ ಮಾಜಿ ಜಿ.ಪಂ. ಅಧ್ಯಕ್ಷ ಕೆ.ಎಂ. ಕೆಂಪರಾಜು ಹಾಗೂ ಬೆಳ್ಳಿ ಪ್ರಕಾಶ್ ಮಾತನಾಡಿ, ರೂಪ ಅವರ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದರು. ವೇದಿಕೆ ನೀಡಿದ ಅಭಿನಂದನೆ ಸ್ವೀಕರಿಸಿದ ಬಿ.ಆರ್.ರೂಪ ಮಾತನಾಡಿ, ತಾಲೂಕಿನ ಜನತೆ ತಮ್ಮನ್ನು ಅಧಿಕಾರಿ ಎಂದು ನೋಡದೆ ಮನೆ ಮಗಳಂತೆ ನೋಡಿಕೊಳ್ಳುವ ಮೂಲಕ ಮೂರೂವರೆ ವರ್ಷ ಕಾಲ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸಿದೆ. ಅವರೆಲ್ಲರಿಗೂ ಕೃತಜ್ಞತೆ ಅರ್ಪಿಸುತ್ತೇನೆ ಎಂದು ಹೇಳಿದರು.
ವೇದಿಕೆ ಅಧ್ಯಕ್ಷ ಓಂಕಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾರಂಭದಲ್ಲಿ ವೇದಿಕೆ ಮುಖಂಡರಾದ ಕೆ.ವಿ. ವಾಸು, ತನ್ವೀರ್ ಅಹಮದ್, ಬಿ.ಎಲ್. ಶ್ರೀನಿವಾಸ್, ತಾಲೂಕು ಬಿಸಿಎಂ ಅಧಿಕಾರಿ ಚನ್ನಪ್ಪ ಇಂಗ್ಲಳ್ಳಿ ಮತ್ತಿತರು ಉಪಸ್ಥಿತರಿದ್ದರು. ಉಪನ್ಯಾಸಕ ಎಂ.ಒ. ಮಮತೇಶ್ ಅಭಿನಂದನಾ ನುಡಿ ನುಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.