ಚಿಕ್ಕಮಗಳೂರು

ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಗೆ ಆರೋಗ್ಯ ತಪಾಸಣೆ

Published On :

ನರಸಿಂಹರಾಜಪುರ: ಇಲ್ಲಿನ 108 ಆಂಬ್ಯುಲೆನ್ಸ್ ಆರೋಗ್ಯ ರಕ್ಷಾದ ವತಿಯಿಂದ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗೆ ಬಿಪಿ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ 108 ಆಂಬ್ಯುಲೆನ್ಸ್ ಸಿಬ್ಬಂದಿ ಎಸ್. ಭೋಜನಾಯಕ್ ಮಾತನಾಡಿ, ಯಾವಾಗಲೂ ಒತ್ತಡದಿಂದ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿಗಳು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ಪೊಲೀಸರು ನಿಯಮಿತವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಬೇಕು. ಕಾಲ, ಕಾಲಕ್ಕೆ ವೈದ್ಯರಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು. ತುರ್ತು ಸಂದರ್ಭಗಳಾದ ರಸ್ತೆ ಅಪಘಾತ, ಹೃದಯಾಘಾತ, ಹಾವು ಕಡಿತ ಮುಂತಾದ ಸಂದರ್ಭಗಳಲ್ಲಿ 108 ನಂಬರಿಗೆ ಕರೆ ಮಾಡಿದರೆ ತಕ್ಷಣ ನಾವು ಸ್ಥಳಕ್ಕೆ ಬಂದು ತುರ್ತು ಚಿಕಿತ್ಸೆ ಮಾಡಿ ಆಸ್ಪತ್ರೆಗೆ ಸೇರಿಸುತ್ತೇವೆ. ಯಾವುದೇ ಕಾರಣಕ್ಕೂ ಸಣ್ಣ ಆರೋಗ್ಯದ ಸಮಸ್ಯೆಗೆ 108ಕ್ಕೆ ಕರೆ ಮಾಡಬೇಡಿ ಎಂದರು. ಕಾರ್ಯಕ್ರಮದಲ್ಲಿ ಪೊಲೀಸ್ ಠಾಣಾಧಿಕಾರಿ ತಿಮ್ಮರಾಜು, ಎಎಸ್‌ಐಗಳಾದ ಮಂಜುನಾಥ್, ಚಂದ್ರಶೇಖರ್, ಸಿಬ್ಬಂದಿಗಳಾದ ಲಕ್ಷ್ಮಿಕಾಂತರಾಜ ಅರಸು, ಚಂದ್ರಪ್ಪ, ರವಿ, ಜಗದೀಶ್, ತಿಪ್ಪೇಶ್, ಎಸ್. ಉಷಾ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.