ಚಿಕ್ಕಮಗಳೂರು

ವಿದ್ಯುತ್ ವ್ಯತ್ಯಯ ಖಂಡಿಸಿ ಪ್ರತಿಭಟನೆ

Published On :

ಮೂಡಿಗೆರೆ: ರಾಜ್ಯ ಸರ್ಕಾರ ತಮ್ಮ ಕುರ್ಚಿ ಉಳಿಸಿಕೊಳ್ಳುವುದರಲ್ಲಿಯೆ ಕಾಲ ಕಳೆದಿದ್ದು, ಮತದಾರರನ್ನು ಸಂಪೂರ್ಣ ಮರೆತು ರಾಜ್ಯವನ್ನು ಕತ್ತಲೆಯಲ್ಲಿ ಮುಳುಗಿಸಿದೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಅರೇನಹಳ್ಳಿ ಪ್ರಕಾಶ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಮಂಗಳವಾರ ಎನ್‌ಎಸ್‌ಯುಐ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಬುಡ್ಡಿ ದೀಪವನ್ನು ಹಿಡಿದು ಓದುವುದರ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಅನಿಮಿಯತ ವಿದ್ಯುತ್ ಕಡಿತಗೊಂಡು ತೊಂದರೆಯುಂಟಾಗುತ್ತಿದೆ. ಕುಡಿಯುವ ನೀರಿಗೆ ಕೃತಕ ಅಭಾವ ಸೃಷ್ಟಿಸುವ ರಾಜ್ಯ ಸರ್ಕಾರ ಕೂಡಲೇ ರಾಜಿನಾಮೆ ನೀಡುವಂತೆ ಒತ್ತಾಯಿಸಿದರು.
ಮಲೆನಾಡು ಪ್ರದೇಶದಲ್ಲಿ ಕೃಷಿಯನ್ನೇ ನಂಬಿ ಬದುಕುತ್ತಿರುವವರಿಗೆ ವಿದ್ಯುತ್ ಇಲ್ಲದೆ ಪರದಾಡುವಂತಾಗಿದೆ. ಮೆಸ್ಕಾಂ ಇಲಾಖೆ ಮನಸ್ಸಿಗೆ ಬಂದಂತೆ ವಿದ್ಯುತ್ ಕಡಿತಗೊಳಿಸುತ್ತಿರುವುದು ಸರಿಯಲ್ಲ. ವಿದ್ಯುತ್ ಕಡಿತವನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೊರಾಟ ನಡೆಸುವುದಾಗಿ ಎಚ್ಚರಿಕೆಯನ್ನು ನೀಡಿದರು.
ಈ ವೇಳೆ ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಶಾಂತ್ ಪಟೇಲ್ ಮೆಸ್ಕಾಂ ಸಹಾಯಕ ಅಭಿಯಂತರ ಚಂದ್ರ ನಾಯ್ಕ್ ಅವರಿಗೆ ಮನವಿ ಸಲ್ಲಿಸಿದರು.
ತಾಲೂಕು ಕಾರ್ಯದರ್ಶಿ ಸುಗೋಷ್, ಜಗತ್, ಚಿರಾಗ್, ನಿಜಗುಣ, ಸಾಕ್ಷಿತ್, ಅವಿನಾಶ್, ರಾಘವೇಂದ್ರ, ಕಾಂತರಾಜ್, ಪ್ರೀತಮ್, ಸಂತೋಷ್, ರತನ್, ಯೂತ್ ಕಾಂಗ್ರೆಸ್‌ನ ದಿನೇಶ್, ಸತೀಷ್, ಬಲರಾಮ ಸೇರಿದಂತೆ ಅನೇಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.