ವಿದ್ಯುತ್ ನಿಲುಗಡೆ
ಚಿಕ್ಕಮಗಳೂರು: ಆಲ್ದೂರು- ಬಾಳೆಹೊನ್ನೂರು ಮಾರ್ಗದಲ್ಲಿ ಜಂಗಲ್ ಕಟ್ಟಿಂಗ್ ಹಾಗೂ ಮಾರ್ಗದ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಬಾಳೆಹೊನ್ನೂರು ಹಾಗೂ ಕೊಪ್ಪ, ಶೃಂಗೇರಿ, ಕ್ವಾರ್ಡ್ಹಿತ್ಲು, ಕಳಸ ಮತ್ತು ಜಯಪುರ, ವಿವಿ ಕೇಂದ್ರಗಳ ನಗರ ಮತ್ತು ಗ್ರಾಮೀಣ ಫೀಡರ್ಗಳಿಂದ ಹೊರಹೊಮ್ಮುವ ಎಲ್ಲಾ ಪ್ರದೇಶಗಳಲ್ಲಿ 14 ರಿಂದ 16ರವರೆಗೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ರಂಗಮಂದಿರ ಉದ್ಘಾಟನೆ
ಕೊಪ್ಪ: ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಲಾಲ್ಬಹಾದ್ದೂರ್ ಶಾಸ್ತ್ರೀ ಕ್ರೀಡಾಂಗಣದಲ್ಲಿ ಪಪಂ ವತಿಯಿಂದ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಮಾಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ಬುಧವಾರ ಪಪಂ ಅಧ್ಯಕ್ಷ ಉಮೇಶ್ ನೇರವೇರಿಸಿದರು. ಪಪಂ ಉಪಾಧ್ಯಕ್ಷೆ ವನಜಾ ತಂಗವೇಲು, ಸದಸ್ಯರಾದ ಕೀಶೋರ್ ಪೇಜಾವರ್, ದಿವಾರಕರ್, ವಾಣಿ ಸತೀಶ್, ಜಯಶ್ರೀ, ಸುಧಾಕರ ಭಟ್, ರಮೇಶ್, ಮೇಬಲ್ ಟೆರಿಸನ್, ಅನಸೂಯ, ಸುಶೀಲಾ ಹಾಗೂ ಪಪಂ ಮುಖ್ಯಾಧಿಕಾರಿ ಶಂಕರಪ್ಪ ಹಾಜರಿದ್ದರು.
ಮತದಾರರ ಮರೆತ ಸರ್ಕಾರ
ಮೂಡಿಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭ್ರಷ್ಟಾಚಾರದಲ್ಲಿ ಮುಳುಗಿ ಮತದಾರರನ್ನು ಮರೆತಿವೆ. ಈ ಬಾರಿ ಈ ಎರಡೂ ಪಕ್ಷಗಳಿಗೆ ಮತದಾರರೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಡಿ.ಆರ್. ಉಮಾಪತಿ ಅಭಿಪ್ರಾಯ ಪಟ್ಟರು.ಪತ್ರಿಕಾ ಭವದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಿಗೆರೆ ಪಟ್ಟಣ ಪಂಚಾಯಿತ್ನಲ್ಲಿ ಬಿಜೆಪಿ ಆಡಳಿತ ಜನರ ಅಭಿವೃದ್ಧಿ ಕಾರ್ಯ ಮಾಡದೇ, ಕಳಪೆ ಕಾಮಗಾರಿಗಳನ್ನು ಮಾಡಿ ಸ್ವ ಅಭಿವೃದ್ಧಿ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಪಟ್ಟಣ ಪಂಚಾಯಿತ್ನ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದರು. ಈ ಗೋಷ್ಠಿಯಲ್ಲಿ ರಾಜ್ಯ ಸಮಿತಿ ಸದಸ್ಯ ಎಂ.ಎಸ್. ಬಾಲಕೃಷ್ಣ, ಕ್ಷೇತ್ರ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ಎ. ವಿಜೇಂದ್ರ, ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್.ಪಿ. ದೇವರಾಜ್ ಉಪಸ್ಥಿತರಿದ್ದರು.
ಪ್ರವೇಶ ಪರೀಕ್ಷೆ
ಚಿಕ್ಕಮಗಳೂರು: ಡೆಹರಾಡೂನ್ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಅರ್ಜಿನಮೂನೆ ಹಾಗೂ ಮಾಹಿತಿಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು, ಇವರನ್ನು ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

