ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಿ
ತರೀಕೆರೆ: ಕ್ರೀಡಾಪಟುಗಳು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂದು ಶಾಸಕ ಡಿ.ಎಸ್. ಸುರೇಶ್ ತಿಳಿಸಿದ್ದಾರೆ.
ಅವರು ಬುಧವಾರ ಪಟ್ಟಣದ ಎಸ್.ಜೆ.ಎಂ. ಪ್ರಥಮ ದರ್ಜೆ ಕಾಲೇಜು ವತಿಯಿಂದ ಕಾಲೇಜು ಕ್ರೀಡಾಂಗಣದಲ್ಲಿ ಏರ್ಪಾಡಾಗಿದ್ದ ಕುವೆಂಪು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಹಿಳೆಯರ ಪಂದ್ಯಾವಳಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಒಲಿಂಪಿಕ್ ಕ್ರೀಡೆಗಳಲ್ಲಿ ನಾವು ಹಿಂದಿದ್ದೇವೆ. ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಬೇಕು. ಅಂತರ್ ಕಾಲೇಜು ಮಹಿಳಾ ಕ್ರೀಡಾಪಂದ್ಯಗಳು ತರೀಕೆರೆಯಲ್ಲಿ ನಡೆಯುತ್ತಿರುವುದು ಅಭಿನಂದನೀಯ. ಸ್ಥಳೀಯ ಪುರಸಭೆ, ತಾಲೂಕು ಪಂಚಾಯಿತಿ ನೆರವಿನೊಂದಿಗೆ ಕಾಲೇಜು ಕ್ರೀಡಾಂಗಣಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು.
ಕುಸ್ತಿ ಪಂದ್ಯ: ತರೀಕೆರೆ ಪುರಸಭೆ ಅಧ್ಯಕ್ಷ ಎಂ. ನರೇಂದ್ರ ಮಾತನಾಡಿ, ಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿವೆ. ಹೆಚ್ಚಿನ ಆಸಕ್ತಿ ವಹಿಸಿ ಗ್ರಾಮೀಣ ಕ್ರೀಡೆಗಳನ್ನು ಉಳಿಸಿಕೊಳ್ಳಬೇಕು. ಗ್ರಾಮೀಣ ಕಲೆಯಾದ ಕುಸ್ತಿ ಕ್ರೀಡೆಯನ್ನು ಒಟಿಜಿಂಪಿಕ್ ಪಂದ್ಯಗಳಲ್ಲಿ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಾಚಾರ್ಯ ಪ್ರೊ.ಕೆ.ವಿ. ಸಜ್ಜನಶೆಟ್ಟರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಿ.ಇ. ಜಯದೇವಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಎಂ. ಪ್ರಕಾಶ್, ಪ್ರೊ.ಕೆ.ಬಿ. ಮಲ್ಲಪ್ಪ, ಪ್ರೊ. ಹೆಗಡಾಳ್ ಮಾತನಾಡಿದರು.
ತಾಪಂ ಅಧ್ಯಕ್ಷೆ ದೀಪಾ ಉಮೇಶ್, ಕಾಲೇಜು ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ. ಯೋಗೀಶ್, ಪಟೇಲ್ ನಾಗನಗೌಡ, ಕಾಲೇಜು ಉಪನ್ಯಾಸಕರು ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಸಕ ಡಿ.ಎಸ್. ಸುರೇಶ್ ಅವರು ಚಟ್ಟನಹಳ್ಳಿ ಪಟೇಲ್ ಪುಟ್ಟೇಗೌಡ ಸ್ಮಾರಕ ಕ್ರೀಡಾಂಗಣದ ಉದ್ಘಾಟನೆಯನ್ನು ನೆರವೇರಿಸಿದರು.
ಪ್ರೊ.ಕೆ.ಬಿ. ಮಲ್ಲಪ್ಪ ಅವರು ಸ್ವಾಗತಿಸಿದರು. ಪ್ರೊ. ಹೆಗಡಾಳ್ ಅವರು ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

