ನೀರು ಪೂರೈಕೆಗೆ ಚಾಲನೆ
ಬೀರೂರು: ಪಟ್ಟಣದ ಅಂಬೇಡ್ಕರ್ ನಗರದಲ್ಲಿರುವ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯವರಿಗೆ ಪೂಜೆ ಸಲ್ಲಿಸುವ ಮೂಲಕ ಪಟ್ಟಣದ ನಿವಾಸಿಗಳಿಗೆ ಉಚಿತ ನೀರು ಪೂರೈಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ದಾನಿ ಕಡೂರಿನ ಸಮಾಜ ಸೇವಕ ಎಚ್. ಉಮೇಶ್ ಮಾತನಾಡಿ, ತಾವು ಸಾಮಾಜಿಕ ಕಳಕಳಿ ಹೊಂದಿದ್ದು, ಕಡೂರು ಮತ್ತು ಬೀರೂರು ಅವಳಿ ಪಟ್ಟಣಗಳ ನಾಗರಿಕರಿಗೆ ಕುಡಿಯುವ ನೀರಿನ ಸಮಸ್ಯೆ ತುಂಬಾ ಬಿಗಡಾಯಿಸಿದ್ದು, ಹನಿ ನೀರಿಗೆ ಪರಿತಪಿಸುವಂತಾಗಿದೆ. ಈ ನಿಟ್ಟಿನಲ್ಲಿ ತಾವು ಸಮಾಜಕ್ಕೆ ತಮ್ಮ ಕೈಲಾದ ಸೇವೆ ಮಾಡುವ ಸದುದ್ದೇಶದಿಂದ ಹಿರಿಯರೊಂದಿಗೆ ಚಿಂತಿಸಿ ಕಾರ್ಯ ಪ್ರವೃತ್ತರಾಗುವ ಮೂಲಕ ನೀರು ಪೂರೈಸುವ ಕಾರ್ಯ ಅನುಷ್ಠಾನಕ್ಕೆ ಮುಂದಾಗಿದ್ದೇನೆ ಎಂದರು. ನೀರಿನ ಸಮಸ್ಯೆ ಸುಧಾರಿಸುವವರೆಗೂ ಈ ಎರಡು ಪಟ್ಟಣಗಳ ವಿವಿಧ ಬಡಾವಣೆಗಳಿಗೆ ನಿತ್ಯವೂ 5 ಟ್ಯಾಂಕರ್ನಿಂದ ನೀರನ್ನು ಉಚಿತವಾಗಿ ಸರಬರಾಜು ಮಾಡುವುದಾಗಿ ಹೇಳಿ ತಮ್ಮ ಸೇವೆಗೆ ಸಾರ್ವಜನಿಕರು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.
ನಂತರ ಉಮೇಶ್ ಅವರನ್ನು ಶ್ರೀ ಮೈಲಾರಲಿಂಗಸ್ವಾಮಿ ದೇವಾಲಯ ಸಮಿತಿ ಸನ್ಮಾನಿಸಿ ಗೌರವಿಸಿತು. ಇದೇ ಸಂದರ್ಭದಲ್ಲಿ ಪುರಸಭಾಧ್ಯಕ್ಷ ಕುಮಾರಸ್ವಾಮಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜು, ಉಪಾಧ್ಯಕ್ಷ ವೀರೇಶಮೂರ್ತಿ, ಕಾರ್ಯದರ್ಶಿ ಲೋಕೇಶ್, ಪುರಸಭಾ ಸದಸ್ಯರಾದ ರುದ್ರಪ್ಪ, ಮಲ್ಲಪ್ಪ, ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

