ಚಿಕ್ಕಮಗಳೂರು

ನೂತನ ಖಾಸಗಿ ಬಸ್ ನಿಲ್ದಾಣ ಉದ್ಘಾಟನೆ

Published On :

ಚಿಕ್ಕಮಗಳೂರು: ನಗರದ ಮಲ್ಲಂದೂರು ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಖಾಸಗಿ ಬಸ್ ನಿಲ್ದಾಣವನ್ನು ನಗರಸಭೆ ಅಧ್ಯಕ್ಷ ಪ್ರೇಂಕುಮಾರ್ ಅವರು  ಬುಧವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷರಾದ ಹೆಚ್.ಡಿ. ತಮ್ಮಯ್ಯ, ಶ್ರೀನಿವಾಸ್, ನಗರಸಭೆ ಸದಸ್ಯರು ಉಪಸ್ಥಿತರಿದ್ದರು.
ಸಿ.ಎಂ.ಎಸ್.ಎಂ.ಟಿ.ಡಿ.ಪಿ ಮತ್ತು ನಗರಸಭೆ ನಿಧಿಯಿಂದ ಸುಮಾರು 1.25 ಕೋಟಿ ವೆಚ್ಚದಲ್ಲಿ ಈ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಇದರಲ್ಲಿ 85 ಲಕ್ಷ  ವೆಚ್ಚದಲ್ಲಿ ಬಸ್ ನಿಲ್ದಾಣ ಹಾಗೂ 40 ಲಕ್ಷ ವೆಚ್ಚದಲ್ಲಿ ಮಳಿಗೆಗಳನ್ನು ನಿರ್ಮಿಸಲಾಗಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಆಧುನಿಕ ರೀತಿಯಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದ್ದು, ದೈನಂದಿನ ಸುಮಾರು 3 ಸಾವಿರ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ನಿಲ್ದಾಣದ ಬಾಕಿ ಉಳಿದ ಕಾಮಗಾರಿಗಳು 15 ದಿನಗಳೊಳಗೆ ಪೂರ್ಣಗೊಳಿಸಲಾಗುವುದು, ಶೀಘ್ರವೇ ಬಸ್ ನಿಲ್ದಾಣ ಸಾರ್ವಜನಿಕ ಬಳಕೆಗೆ ಸಮರ್ಪಿತವಾಗಲಿದೆ ಎಂದು ಪೌರಾಯುಕ್ತ ಹೆಚ್.ಜಿ. ಪ್ರಭಾಕರ್ ತಿಳಿಸಿದ್ದಾರೆ.
ಖಂಡನೆ: ನಗರದಲ್ಲಿ ಸಮರ್ಪಣೆಗೊಂಡ ಖಾಸಗಿ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭ ಕಾರ್ಯಕ್ರಮಕ್ಕೆ ಬಸ್ ನಿಲ್ದಾಣಕ್ಕೆ ಉಚಿತವಾಗಿ ಜಾಗ ನೀಡಿದ ಹಾಗೂ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳಿಗೆ ಆಹ್ವಾನ ನೀಡಿದೆ ಕಡೆಗಣಿಸಲಾಗಿದೆ ಎಂದು ಜಿಲ್ಲಾ ಬಸ್ ಆಪರೇಟರ್ಸ್ ಅಸೋಸಿಯೇಷನ್‌ನ ಕಾರ್ಯದರ್ಶಿ ಚಂದ್ರಶೇಖರ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಖಾಸಗಿ ಬಸ್‌ಗಳಿದ್ದು, ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘ ಅಸ್ತಿತ್ವದಲ್ಲಿದ್ದರೂ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಿರುವ ಖಾಸಗಿ ಬಸ್ ಮಾಲೀಕರನ್ನು ಸಮಾರಂಭಕ್ಕೆ ಆಹ್ವಾನಿಸದೆ ಕಡೆಗಣಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.