ಸ್ಥಿರಾಸ್ತಿ ಮಾರುಕಟ್ಟೆ ಬೆಲೆ ಪರಿಷ್ಕರಣೆ
ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ ಸ್ಥಿರಾಸ್ತಿಗಳ ಮಾರುಕಟ್ಟೆ ಬೆಲೆಯನ್ನು ಪರಿಷ್ಕರಿಸಲಾಗಿದ್ದು, ಉದ್ದೇಶಿತ ದರಗಳ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ನರಸಿಂಹರಾಜಪುರ ಉಪ ನೋಂದಾಣಾಧಿಕಾರಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಉದ್ದೇಶಿತ ದರಗಳ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲಿ 15 ದಿನಗಳರೊಳಗೆ ಸಲ್ಲಿಸಬಹುದಾಗಿದೆ ಎಂದು ನರಸಿಂಹರಾಜಪುರ ಉಪ ನೋಂದಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವಾರ್ಷಿಕೋತ್ಸವ
ಚಿಕ್ಕಮಗಳೂರು ತಾ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಫೆ.14ರಂದು ಬೆಳಿಗ್ಗೆ 10ಕ್ಕೆ ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ರೆಡ್‌ಕ್ರಾನ್‌ನಿಂದ ಚಿಕಿತ್ಸಾ ತರಬೇತಿ
ಚಿಕ್ಕಮಗಳೂರಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಸಾರ್ವಜನಿಕರಿಗೆ ಎರಡು ದಿನಗಳ ತುರ್ತು ಚಿಕಿತ್ಸಾ ತರಬೇತಿ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕ ವಲಯದಲ್ಲಿ ಮಾನವೀಯ ಸೇವೆ ತೊಡಗಿಸಿಕೊಳ್ಳುವ ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿರಗಳೊಂದಿಗೆ ಅರ್ಜಿಯನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಚಿಕ್ಕಮಗಳೂರು ಇವರಿಗೆ ಸಲ್ಲಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

