ಚಿಕ್ಕಮಗಳೂರು

ಬೀರೂರು ಪುರಸಭಾ ಸದಸ್ಯರಿಗೆ ಬೀಳ್ಕೊಡುಗೆ

Published On :

ಬೀರೂರು: ಸ್ಥಳೀಯ ಪುರಸಭೆಯ ಜನಪ್ರತಿನಿಧಿಗಳ ಐದು ವರ್ಷಗಳ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ಹಾಗು ಪುರಸಭೆ ಸಿಬ್ಬಂದಿ ವರ್ಗದಿಂದ ನಿರ್ಗಮಿತ ಪುರಸಭಾ ಸದಸ್ಯರಿಗೆ ಆತ್ಮೀಯ ಬೀಳ್ಕೊಡುಗೆಯೊಂದಿಗೆ ಸನ್ಮಾನ ಕಾರ್ಯಕ್ರಮ  ಏರ್ಪಡಿಸಲಾಗಿತ್ತು.
ಮುಖ್ಯಾಧಿಕಾರಿ ಓಂಕಾರಮೂರ್ತಿ ಮಾತನಾಡಿ,ಜನಪ್ರತಿನಿಧಿಗಳಿಂದ ಅಭಿವೃದ್ಧಿ ಕಾರ್ಯ ಚುರುಕುಗೊಳ್ಳುವ ಜೊತೆ ಸಮಸ್ಯೆಗಳಿಗೆ ಶೀಘ್ರ ಪರಿಹಾರ, ಸಮಾಧಾನ ದೊರಕುತ್ತಿತ್ತು ಎಂದು ಹೇಳಿ ಅಭಿವೃದ್ಧಿಗೆ ಶ್ರಮಿಸಿದ ಸದಸ್ಯರಿಗೆ ಅಭಿನಂದಿಸಿದರು.
ಅಭಿಯಂತರ ಭಾಸ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ಎಸ್. ಕುಮಾರಸ್ವಾಮಿ ಮಾತನಾಡಿ, ಜನಸೇವೆ ಮುಖ್ಯವಾಗಿದ್ದು ಹಾಗಾದಾಗ ಸೇವೆಗೆ ಮಹತ್ವ ಬರುತ್ತದೆ. ಬಡವರಿಗೆ ಒಳ್ಳೆಯದನ್ನು ಮಾಡಿದಾಗ ಜನಪ್ರತಿನಿಧಿಗಳು ಗೌರವ ಹೆಚ್ಚಾಗುತ್ತದೆ. ಪ್ರೀತಿ ವಿಶ್ವಾಸದಿಂದ  ಕಠಿಣ ಸಮಸ್ಯೆಗಳನ್ನು ಪರಿಹರಿಸಬಹುದು ಎಂದರು. ಪತ್ರಕರ್ತರು ಸೇರಿದಂತೆ ಎಲ್ಲರನ್ನೂ ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.