ಚಿಕ್ಕಮಗಳೂರು

ರು. 10 ಲಕ್ಷ ವೆಚ್ಚದಲ್ಲಿ ರಸ್ತೆಗೆ ಕಾಂಕ್ರೀಟ್

Published On :

ಚಿಕ್ಕಮಗಳೂರು: ನಗರದ ರಾಮನಹಳ್ಳಿಯ ವೈಭವ್ ಕ್ಯಾಂಟೀನ್ ರಸ್ತೆ ಸೇರಿದಂತೆ 10 ಲಕ್ಷ ರು. ವೆಚ್ಚದಲ್ಲಿ ವಿವಿಧ ರಸ್ತೆಗಳನ್ನು ಕಾಂಕ್ರಿಟೀಕರಣ ಮಾಡಲಾಗುತ್ತಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಸಿ.ಆರ್. ಪ್ರೇಂಕುಮಾರ್ ಹೇಳಿದ್ದಾರೆ.
ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ, ಎಸ್‌ಇಪಿ ಯೋಜನೆಯಲ್ಲಿ ನಗರದ ವಿವಿಧ ಬಡಾವಣೆಗಳಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ರಾಮನಹಳ್ಳಿಯ ಕ್ಯಾಂಟೀನ್ ರಸ್ತೆಯನ್ನು 10 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ಹಾಕಲಾಗುತ್ತಿದೆ. ನಗರದ ಎಲ್ಲಾ ಕಾಲೋನಿಗಳಿಗೂ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿದೆ. ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದೆ ಎಂದರು.
ನಗರಸಭಾ ಮಾಜಿ ಸದಸ್ಯ ಕುಮಾರಸ್ವಾಮಿ ಮಾತನಾಡಿ, ಸ್ಥಳೀಯ ಜನರ ಸಹಕಾರದಿಂದ ವಾರ್ಡ್‌ನಲ್ಲಿ ರಸ್ತೆ, ಕುಡಿಯುವ ನೀರಿನ ಕಾಮಗಾರಿ, ಬಾಕ್ಸ್ ಚರಂಡಿ ನಿರ್ಮಾಣ, ಸಮುದಾಯ ಭವನ, ಉದ್ಯಾನವನ ಸೇರಿದಂತೆ 2.5 ಕೋಟಿಗೂ ಹೆಚ್ಚು ಅಭಿವೃದ್ದಿ ಕೆಲಸಗಳಾಗಿವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.