ತಾಲೂಕು ಅಧ್ಯಕ್ಷ ಶೇಖ್ ಅಹಮದ್ (ಸುದ್ದಿ ಸಂಕ್ಷೇಪ)
ಚಿಕ್ಕಮಗಳೂರು: ಅಖಿಲ ಭಾರತ ಬ್ಯಾರಿ ಒಕ್ಕೂಟದ ಚಿಕ್ಕಮಗಳೂರು ತಾಲೂಕು ಅಧ್ಯಕ್ಷರಾಗಿ ಎಂ.ಪಿ. ಶೇಖ್ ಅಹಮದ್ ಆಯ್ಕೆಯಾಗಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ಶುಕ್ರವಾರ ನಡೆದ ಚಿಕ್ಕಮಗಳೂರಿನ ಬ್ಯಾರಿ ಸಮುದಾಯದ ಮುಖಂಡರ ಸಭೆಯಲ್ಲಿ ಈ ಅವಿರೋಧ ಆಯ್ಕೆ ನಡೆದಿದೆ. ಉಪಾಧ್ಯಕ್ಷ ಮೂಸಾ, ಕಾರ್ಯದರ್ಶಿ ಮನ್ಸೂರ್, ಕೋಶಾಧಿಕಾರಿ ಅಬ್ದುಲ್ ಅಜೀಜ್, ಸಲಹೆಗಾರರಾಗಿ ಮಹಮದ್ ಸೇರಿದಂತೆ 11 ಮಂದಿ ಸದಸ್ಯರನ್ನು ಆಯ್ಕೆ ಮಾಡಿ ಸಮಿತಿ ರಚಿಸಲಾಯಿತು.
ಇಂದು ಆರೋಗ್ಯ ತಪಾಸಣಾ ಶಿಬಿರ
ಶೃಂಗೇರಿ: ಪಟ್ಟಣದ ಶಾರದಾ ಧನ್ವಂತರಿ ಆಸ್ಪತ್ರೆಯಲ್ಲಿ ಮಂಗಳೂರಿನ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗಪಡೆದುಕೊಳ್ಳಬಹುದಾಗಿದೆ. ಶಿಬಿರ ಬೆಳಗ್ಗೆಯಿಂದ ಆರಂಭವಾಗಲಿದೆ.
ಅರ್ಜಿ ಆಹ್ವಾನ
ನರಸಿಂಹರಾಜಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 2013-14 ನೇ ಸಾಲಿಗೆ 6 ನೇ ತರಗತಿಗೆ ಅರ್ಜಿ ಆಹ್ವಾನಿಸಲಾಗಿದೆ. ನರಸಿಂಹರಾಜಪುರ ತಾಲೂಕಿನ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ 6ನೇ ತರಗತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆ. 25 ಕೊನೆ ದಿನ. ಪ್ರವೇಶ ಪರೀಕ್ಷೆ ಮಾರ್ಚ್ 24 ರಂದು ತಾಲೂಕು ಕೇಂದ್ರದಲ್ಲಿ ನಡೆಯಲಿದೆ. ಮಾಹಿತಿಗೆ ಸಮಾಜ ಕಲ್ಯಾಣ ಅಧಿಕಾರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕಡೂರು: ಕರ್ನಾಟಕ ಸರ್ಕಾರದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ನಡೆಯುತ್ತಿರುವ ಕಡೂರು ತಾಲೂಕಿನಲ್ಲಿರುವ ಮುರಾರ್ಜಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 2013- 14 ನೇ ಸಾಲಿಗೆ 6 ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಫೆಬ್ರವರಿ 4 ರಿಂದ 35ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.
ನೀರಿನ ಟ್ಯಾಂಕ್ ಶುದ್ಧೀಕರಣ
ಮೂಡಿಗೆರೆ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೇಮಾವತಿ ಮತ್ತು ಸುಂಡೆಕೆರೆ ಹಳ್ಳದಿಂದ ಸರಬರಾಜಾಗುವ ಕುಡಿಯುವ ನೀರಿನ ಟ್ಯಾಂಕ್ಗಳನ್ನು ಕಳೆದ 8 ದಿನಗಳಿಂದ ಬೆಂಗಳೂರಿನ ಪ್ರಜ್ವಲ್ ಟ್ಯಾಂಕ್ ಕ್ಲೀನಿಕ್ ಸಂಸ್ಥೆ ಭರದಿಂದ ಶುದ್ಧೀಕರಣ ಮಾಡುತ್ತಿದೆ. ಈ ಸಂದರ್ಭದಲ್ಲಿ ತಹಸೀಲ್ದಾರ್ ಜಿ.ಎಸ್. ಸೈಯದ್ ಮನಿರ್ ಮಾತನಾಡಿ, ತಾಂತ್ರಿಕ ಕಾರಣಗಳಿಂದ ಕಳೆದ 4-5 ದಿನಗಳಿಂದ ಪಟ್ಟಣದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಈಗಾಗಲೇ ಪಟ್ಟಣದ 4 ಓವರ್ ಹೆಡ್ ಟ್ಯಾಂಕ್ ಸೇರಿದಂತೆ ಕುಡಿಯುವ ನೀರಿನ ಘಟಕ ಶುದ್ಧೀಕರಣ ಭಾಗಶಃ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

