ಸಂಸ್ಕೃತಿ ರಕ್ಷಣೆಗೆ ಯುವಕರು ಮುಂದಾಗಿ
ಚಿಕ್ಕಮಗಳೂರು: ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ದೇಶದ ಸಂಸ್ಕೃತಿಯನ್ನು ಉಳಿಸಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶೃಂಗೇರಿ ಶಿವಣ್ಣ ಕರೆ ನೀಡಿದ್ದಾರೆ.
ನಗರದ ಕುವೆಂಪು ಕಲಾ ಮಂದಿರದಲ್ಲಿ ಗುರುವಾರ ನಡೆದ ಚಿಕ್ಕಮಗಳೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ವಸತಿ ನಿಲಯಗಳನ್ನು ನಿರ್ಮಿಸಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅನುಕೂಲ ಕಲ್ಪಿಸಿದೆ ಎಂದರು.
ಸಂಸ್ಕಾರ ಮರೆಯಬೇಡಿ: ವಿದ್ಯಾಭ್ಯಾಸದ ಜೊತೆಗೆ ಸಂಗೀತ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ದೇಶದ ಸತ್ಪ್ರಜೆಯಾಗಬೇಕು. ಸಂಸ್ಕೃತಿ ಸಂಸ್ಕಾರಗಳಿಂದ ಉನ್ನತವಾದುದನ್ನು ಸಾಧಿಸಬಹುದು. ಆಧುನಿಕತೆಯ ವ್ಯಾಮೋಹದಲ್ಲಿ ಸಂಸ್ಕಾರಗಳನ್ನು ಮರೆಯುತ್ತಿರುವುದು ವಿಷಾದನೀಯ ಎಂದು ಹೇಳಿದರು.
ನಗರಸಭೆ ಮಾಜಿ ಅಧ್ಯಕ್ಷ ಪ್ರೇಂಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿದಾಗ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಹಿಂದೆ ವ್ಯಾಸಂಗ ಮಾಡುವುದು ಕಷ್ಟಕರವಾಗಿತ್ತು. ಆದರೆ, ಇಂದು ವಿದ್ಯಾಭ್ಯಾಸಕ್ಕೆ ಬೇಕಾದ ಎಲ್ಲಾ ಅನುಕೂಲತೆಗಳು ಲಭ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ವೆಂಕಟೇಶ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಧನಂಜಯ, ಕನ್ನಡ ಉಪನ್ಯಾಸಕ ಸುಂದ್ರೇಶ್, ಹಾಸನ ಎವಿಕೆ ಬಾಲಕಿಯರ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಮಲ್ಲೇಶಗೌಡ, ಕಾನೂನು ಕಾಲೇಜಿನ ಪ್ರಾಂಶುಪಾಲ ನಟರಾಜ್, ಕೆ. ಭರತ್, ದೀಪಕ್ ದೊಡ್ಡಯ್ಯ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

