ಜೆಡಿಎಸ್ ಬಲಿಷ್ಠ: ನಾಗಣ್ಣ
ಮೂಡಿಗೆರೆ: ತಾಲೂಕಿನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷವು ಬಲಿಷ್ಟವಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಣ್ಣ ಅಭಿಪ್ರಾಯಪಟ್ಟರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಪಕ್ಷವನ್ನು ರಾಜ್ಯಾದ್ಯಂತ ಸಂಘಟನೆ ಮಾಡಲಾಗಿದೆ. ಪ್ರತಿ ಬೂತ್ ಮಟ್ಟದಲ್ಲೂ ನಾಯಕತ್ವದ ಪಡೆಗಳನ್ನು ರಚಿಸಲಾಗಿದೆ. ಈ ಬಾರಿ ಜೆಡಿಎಸ್ ಗೆಲವು ಸಾಧಿಸುವುದು ನಿಶ್ಚಿತ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ನೀಡದೆ ವಚನ ಭ್ರಷ್ಟರು ಎಂಬ ಆರೋಪ ಬಂದಿದ್ದರ ಪರಿಣಾಮ ಮತದಾರರ ಓಲೈಕೆಯಲ್ಲಿ ವಿಫರಾಗಿದ್ದೇವೆ. ಅದೇ ಮತದಾರರು ಬಿಜೆಪಿ ಆಢಳಿತವನ್ನು ನೋಡಿ, ಸಾಕಪ್ಪ ಸಾಕು ಇವರ ಅಧಿಕಾರ ಎನ್ನುವ ಮಟ್ಟಿಗೆ ತಲುಪುವುದರೊಂದಿಗೆ. ಜೆಡಿಎಸ್ ಬಿಜೆಪಿಗೆ ಅಧಿಕಾರ ನೀಡದೆ ಉತ್ತಮ ಕೆಲಸ ಮಾಡಿತ್ತು ಎಂಬ ಭಾವನೆ ಜನಸಾಮಾನ್ಯರಲ್ಲಿ ಮೂಡಿ ಬಂದಿದೆ. ಈ ಬಾರಿ ಮೂಡಿಗೆರೆ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಗೆಲುವು ಖಚಿತ ಎಂದು ಹೇಳಿದರು.
ಮೂಡಿಗೆರೆ ವಿಧಾನಸಭಾ ಕ್ಷೇತ್ರದಿಂದ ಐವರು ಆಕಾಂಕ್ಷಿಗಳಿದ್ದಾರೆ. ಈ ಐದು ಜನರಲ್ಲಿ ಕ್ಷೇತ್ರದಲ್ಲಿ ನಿರ್ವಹಿಸುವ ಸಂಘಟನಾತ್ಮಕ ಶಕ್ತಿಯನ್ನು ಗುರುತಿಸಿ ಅವರಿಗೆ ಪಕ್ಷದ ಟಿಕೆಟ್ ಕೊಡಲಾಗುವುದು ಎಂದರು.
ಸಭೆಯಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷ ಡಿ.ಆರ್. ಉಮಾಪತಿ, ರಾಜ್ಯ ಸಮಿತಿ ಸದಸ್ಯ ಎಂ.ಎಸ್. ಬಾಲಕೃಷ್ಣೇಗೌಡ, ಕೆ. ವೆಂಕಟೇಶ್, ಅಶ್ವತ್ಥ್, ಬಕ್ಕಿ ನಾರಾಯಣ್‌ಗೌಡ, ಅಕ್ಮಲ್, ದೇವರಾಜ್, ಲೋಹಿತ್, ಎಸ್.ಎ. ವಿಜೇಂದ್ರ, ಕೃಷ್ಣೇಗೌಡ, ಬಿ.ಎಸ್. ಅಜಿತ್‌ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

