ಪುರುಷರ ಹ್ಯಾಂಡ್ಬಾಲ್ ಕ್ರೀಡಾಕೂಟ
ತರೀಕೆರೆ: ಕ್ರೀಡೆ ರಾಷ್ಟ್ರದ ಪ್ರತಿಷ್ಟೆಯ ಸಂಕೇತ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್. ಪರಮೇಶ್ವರಪ್ಪ ತಿಳಿಸಿದ್ದಾರೆ.
ಅವರು ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಂದ ಎಸ್.ಜೆ.ಎಂ ಕಾಲೇಜು ಆವರಣದಲ್ಲಿ ಏರ್ಪಾಡಾಗಿದ್ದ ಕುವೆಂಪು ವಿಶ್ವನಿದ್ಯಾಲಯದ ಅಂತರ ಕಾಲೇಜು ಪುರುಷರ ಹ್ಯಾಂಡ್ಬಾಲ್ ಕ್ರೀಡಾಕೂಟದ ಉದ್ಘಾಟನೆ ಹಾಗೂ ತಾ. ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಹ್ಯಾಂಡ್ಬಾಲ್ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ರಚನಾತ್ಮಕ ಕಾರ್ಯ: ಕ್ರೀಡೆಯಿಂದ ಆರೋಗ್ಯ ಸ್ವಸ್ಥ ದೇಹ ಮತ್ತು ಮನಸ್ಸು ದೊರೆಯುತ್ತದೆ. ಯುವಕರನ್ನು ರಚನಾತ್ಮಕ ಕಾರ್ಯದಲ್ಲಿ ತೊಡಗಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ಆಗ ನಿಜ ಪ್ರತಿಭೆ ಪ್ರಕಾಶಿಸಬೇಕು ಎಂದರು.
ಪುರಸಭೆ ಅಧ್ಯಕ್ಷ ಎಂ. ನರೇಂದ್ರ ಮಾತನಾಡಿ, ಪಟ್ಟಣದಲ್ಲಿ ಎಲ್ಲ ಕ್ಷೇತ್ರಗಳಿಗೂ ಹೊಂದಿಕೊಂಡಂತೆ ವಿವಿಧ ಕ್ರೀಡಾಕೂಟಗಳು ನಡೆಯುತ್ತಿದೆ. ಎಲ್ಲ ವಿಶ್ವವಿದ್ಯಾಲಯದ ಕ್ರೀಡಾಕೂಟಗಳು ತರೀಕೆರೆಯಲ್ಲಿ ನೆಡೆಯುವಂತಾಗಬೇಕು ಎಂದು ತಿಳಿಸಿದರು.
ಪಾಲ್ಗೊಳ್ಳುವಿಕೆ ಮುಖ್ಯ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯರಾದ ಅಲಿಸ್ ಡಿಕಾಸ್ಟ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪುರುಷರ ಹ್ಯಾಂಡ್ಬಾಲ್ ಕ್ರೀಡಾಕೂಟ ಮೊದಲ ಪ್ರಯತ್ನವಾಗಿದೆ. ಸೋಲು ಮುಂದಿನ ಯಶಸ್ಸಿನ ಗುಟ್ಟು. ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದರು.
ಪ್ರಾಚಾರ್ಯ ಪ್ರೊ.ಕೆ.ವಿ. ಸಜ್ಜನ ಶೆಟ್ಟರ್, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಿ. ವೆಂಕಟರಾಮಯ್ಯ, ಕುವೆಂಪು ವಿ.ವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಎಸ್.ಎಂ. ಪ್ರಕಾಶ್ ಮತ್ತಿತರರು ಮಾತನಾಡಿದರು. ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಿ. ವೆಂಕಟರಾಮಯ್ಯ ಅವರನ್ನು ಸನ್ಮಾನಿಸಲಾಯಿತು.
ದೈಹಿಕ ಶಿಕ್ಷಣ ನಿರ್ದೇಶಕ ಕೆ.ಬಿ. ಮಲ್ಲಪ್ಪ, ಡಾ. ಜಗದೀಶ್, ಜಯಕೀರ್ತಿ, ಪ್ರೊ.ಪಿ.ಜಿ. ಶಿವಮೂರ್ತಿ, ಚಂದ್ರಪ್ಪ, ಡಾ.ಜಿ.ಎನ್. ಲತಾಕುಮಾರಿ, ಅಧ್ಯಾಪಕರು, ಕಾಲೇಜು ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾಗರಾಜ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

