ಚಿಕ್ಕಮಗಳೂರು

ಶ್ರದ್ಧಾಭಕ್ತಿಯಿಂದ ರಥಸಪ್ತಮಿ ಆಚರಣೆ

Published On :

ಚಿಕ್ಕಮಗಳೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ನಗರದ ಎಂಇಎಸ್ ಕಾಲೇಜಿನಲ್ಲಿ ಭಾನುವಾರ ರಥಸಪ್ತಮಿ ಹಬ್ಬವನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು.
ನಸುಕು ಸರಿದು ಬೆಳಕು ಹರಿಯುವ ಮುನ್ನವೇ ರಥಸಪ್ತಮಿ ಅಂಗವಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನೂರಾರು ಯೋಗಾಭ್ಯಾಸಿಗಳು ಪೂರ್ವಾಭಿಮುಖವಾಗಿ ನಿಂತು ಮಂತ್ರ ಪಠಣದ ನಡುವೆ ಸಾಮೂಹಿಕವಾಗಿ 108 ಬಾರಿ ಸೂರ್ಯ ನಮಸ್ಕಾರವನ್ನು ಮಾಡಿದರು.
ನಂತರ ನಡೆದ ಸಮಾರಂಭವನ್ನು ಸಮಿತಿಯ ಅಧ್ಯಕ್ಷ ಬಿ. ವರದರಾಜು ಉದ್ಘಾಟಿಸಿ ಮಾತನಾಡಿ, ಪ್ರತಿದಿನ ಸೂರ್ಯ ನಮಸ್ಕಾರ ಮತ್ತು ಯೋಗಾಭ್ಯಾಸ ಮಾಡುವುದರಿಂದ ಮನುಷ್ಯ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಂತನಾಗಿ ಬಾಳಬಹುದು ಎಂದರು.
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಾರ್ವಜನಿಕರಿಗೆ ಉಚಿತವಾಗಿ ಯೋಗಾಭ್ಯಾಸ ಮತ್ತು ಪ್ರಾಣಾಯಾಮವನ್ನು ಕಲಿಸುವುದರ ಜೊತೆಗೆ ಅವರಲ್ಲಿ ನಮ್ಮ ಸಂಸ್ಕೃತಿ, ಪರಂಪರೆ, ಸಂಪ್ರದಾಯ ಮತ್ತು ಸಂಸ್ಕಾರವನ್ನು ತುಂಬುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಮಲ್ನಾಡಿಹಳ್ಳಿಯ ಅನಾಥ ಸೇವಾಶ್ರಮದ ವಿದ್ಯಾರ್ಥಿಗಳಿಂದ ಯೋಗಾಸನ ಪ್ರದರ್ಶನ ಜರುಗಿತು. ನಾಗಪ್ಪಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಯಮಿ ಶ್ರೀನಿವಾಸರಾವ್, ನ್ಯಾಯವಾದಿ ಕೇಶವಮೂರ್ತಿ, ಪತ್ರಕರ್ತ ನಾಗೇಂದ್ರರಾವ್ ತೇರದಾಳ್, ಸಮಿತಿಯ ಸಂಚಾಲಕ ಜಿ. ರಮೇಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.