ಚಿಕ್ಕಮಗಳೂರು

19ಕ್ಕೆ ಮದ್ಯದಂಗಡಿ ಬಂದ್

Published On :

ಚಿಕ್ಕಮಗಳೂರು: ಅಂತರಘಟ್ಟಮ್ಮ ಜಾತ್ರೆ ಹಿನ್ನೆಲೆಯಲ್ಲಿ ಫೆ. 19ರ ಬೆಳಿಗ್ಗೆ 7 ಗಂಟೆಯಿಂದ ಫೆ. 20 ರ ಬೆಳಿಗ್ಗೆ 7 ಗಂಟೆವರೆಗೆ ಕಡೂರು ತಾಲೂಕು ಬೀರೂರು ಪಟ್ಟಣ ಹಾಗೂ ಸುತ್ತಮುತ್ತಲಿನ 5 ಕಿ.ಮೀ. ಫಾಸಲೆಯಲ್ಲಿ ಕೆ.ಬಿ.ಸಿ.ಎಲ್. ಹೊರತುಪಡಿಸಿ ಎಲ್ಲಾ ನಮೂನೆಯ ಮದ್ಯದಂಗಡಿಗಳನ್ನು ಮುಚ್ಚುವಂತೆಯೂ ಹಾಗೂ ಮದ್ಯ, ಬೀರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮೆಷಿನ್ ಆಪರೇಟರ್ ತರಬೇತಿ
2012-13ನೇ ಸಾಲಿನ ಸುವರ್ಣ ವಸ್ತ್ರನೀತಿ ಯೋಜನೆಯಲ್ಲಿ 18-35 ವರ್ಷ ವಯೋವುತಿಯಿರುವ ನಿರುದ್ಯೋಗಿ ಯುವಕಣಯುವತಿಯರಿಂದ ಒಂದು ತಿಂಗಳ ಅವಧಿಗೆ ಸಿವಿಂಗ್ ಮೆಷಿನ್ ಆಪರೇಟರ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆ. 23 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೆ.ಎಂ.ರಸ್ತೆ, ಚಿಕ್ಕಮಗಳೂರು (ದೂರವಾಣಿ 08262- 220021) ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಪರೀಕ್ಷೆ ಮೂಲಕ ಆಯ್ಕೆ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ 70 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.