ಚಿಕ್ಕಮಗಳೂರು

ಪಕ್ಷ ಬಿಡುವುದಿದ್ದರೆ ಕೂಡಲೇ ಬಿಡಿ

Published On :

ಕಡೂರು: ಪಕ್ಷದಲ್ಲಿದ್ದು ಪಕ್ಷಕ್ಕೆ ದುಡಿಯದಿರುವುವವರಿಂದ ಯಾವುದೇ ಲಾಭ ಇಲ್ಲ. ಪಕ್ಷ ಬಿಡುವ ಯೋಚನೆಯಿದ್ದವರು ಮುಂದೆ ಪಕ್ಷ ಬಿಡುವುದಕ್ಕಿಂತ ಈಗಲೇ ಪಕ್ಷ ತೊರೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.    
 ಅವರು ಪಟ್ಟಣದ ಲಯನ್ಸ್ ಸಭಾಂಗಣದಲ್ಲಿ ಕಡೂರು ಹಾಗೂ ಬೀರೂರು ಬ್ಲಾಕ್ ಕಾಂಗ್ರೆಸ್ನಿಂದ ಏರ್ಪಡಿಸಲಾಗಿದ್ದ ಚುನಾವಣಾ ಪ್ರಚಾರ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಂದು ಹುಳುಕು ಹಲ್ಲು ಇಡೀ ದಂತಪಂಕ್ತಿಯನ್ನೇ ಹಾಳು ಮಾಡುವಂತೆ ಕಾಂಗ್ರೆಸ್ನಲ್ಲಿದ್ದುಕೊಂಡು ಪಕ್ಷ ಹಾಳು ಮಾಡುವುದಕ್ಕಿಂತ ಪಕ್ಷ ಬಿಟ್ಟು ಹೋದರೆ ಒಳಿತು ಎಂದರು.
19ರಂದು ಅರ್ಜಿ: ಕಡೂರು ಬೀರೂರು ಪುರಸಭೆ ಚುನಾವಣಾ ಆಕಾಂಕ್ಷಿಗಳು ಫೆ.19ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದು, ಅಂದು ಸಂಜೆಯೇ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿ 20ರಂದು ಬಿ ಫಾರಂ ನೀಡಲಾಗುವುದು ಎಂದರು.
ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ ಮಾತನಾಡಿ, ಒಂದು ರಾಜಕೀಯ ಪಕ್ಷ ಎಂದ ಮೇಲೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರುವುದು ಸಹಜ. ಅದನ್ನು ಮರೆತು ಒಗ್ಗಟಿನಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ದುಡಿಯಬೇಕು ಎಂದರು.
ಜಿಪಂ  ಮಾಜಿ ಅಧ್ಯಕ್ಷ ಕೆ.ಎಂ. ಕೆಂಪರಾಜು ಮಾತನಾಡಿ, ಬರಲಿರುವ ಪುರಸಭಾ ಚುನಾವಣೆಯಲ್ಲಿ ಕಡೂರು ಹಾಗು ಬೀರೂರು ಪಟ್ಟಣಗಳ ಪುರಸಭೆಗಳಲ್ಲಿ ಹೆಚ್ಚು ಸ್ಥಾನ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಬಲವಾಗಿದೆ ಎಂಬ ಸಂದೇಶ ರವಾನೆಯಾಗಬೇಕಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ಒಡೆಯರ್ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್.ಮಹೇಶ್ ಹಾಗೂ ಕಡೂರು ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಮೌಳಿಯವರನ್ನು ಸನ್ಮಾನಿಸಲಾಯಿತು.
ಕಾಂಗ್ರೆಸ್ ಕಡೂರು ಹಾಗು ಬೀರೂರು ಬ್ಲಾಕ್ ಅಧ್ಯಕ್ಷ ಎಂ.ಎಚ್. ಚಂದ್ರಪ್ಪ, ಕೆ.ಎಂ.ವಿನಾಯಕ, ಮುಖಂಡ  ಶರತ್ ಕೃಷ್ಣಮೂರ್ತಿ, ಕೆ.ಎಸ್. ಆನಂದ್, ಸಾವಿತ್ರಿ ಗಂಗಪ್ಪ, ಕೆ.ಜಿ. ಶ್ರೀನಿವಾಸಮೂರ್ತಿ, ಹೂವಿನ ಗೋವಿಂದಪ್ಪ, ಡಿ. ಲಕ್ಷ್ಮಣ್, ಸಾವಿತ್ರಿ ಗಂಗಪ್ಪ, ಬಶೀರ್ ಸಾಬ್ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.