ಮುಂದುವರಿದ ಮಳೆ
ಶೃಂಗೇರಿ: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಮಳೆಗಾಲದ ವಾತಾವರಣ ಉಂಟಾಗಿದ್ದು, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಭಾನುವಾರ ಸಾಧಾರಣ ಮಳೆ ಸುರಿದಿದೆ. ಶನಿವಾರದಿಂದ ಮುಂದುವರೆದ ಮಳೆ ಭಾನುವಾರ ಮಧ್ಯಾಹ್ನದವರೆಗೂ ಸುರಿದಿದೆ. ಭಾನುವಾರ ಸಂಜೆಯವರೆಗೂ ಮೋಡ ಕವಿದ ವಾತಾವರಣ ಉಂಟಾಗಿತ್ತು. ಗ್ರಾಮೀಣ ಪ್ರದೇಶದ ಕೆಲವೆಡೆ ತುಂತುರು ಮಳೆ ಬರುತ್ತಿತ್ತು. ಅಕಾಲಿಕ ಮಳೆ, ಮೋಡ ಕವಿದ ವಾತಾವರಣದಿಂದ ಅಡಕೆ ಕೊಯಿಲಿಗೆ ಹಿನ್ನಡೆ ಉಂಟಾಗಿದ್ದು, ಅಡಕೆ ಬೆಳೆಗಾರರಲ್ಲಿ ಆತಂಕ ಉಂಟಾಗಿದೆ.
ಕರಾಟೆ: ಬೆಸ್ಟ್ ಅವಾರ್ಡ್ ಸಮಾರಂಭ
ಶೃಂಗೇರಿ: ಪಟ್ಟಣದ ಜೆಸಿಬಿಎಂ ಕಾಲೇಜಿನ ಡಾ.ಟಿ.ಎಂ.ಎ. ಪೈ ಸಭಾಂಗಣದಲ್ಲಿ ಫೆ.24 ರಂದು ಟೆಕ್ವಾಂಡೋ ಮಾರ್ಷಲ್ ಆರ್ಟ್ ಕರಾಟೆ ಸ್ಕೂಲ್ ಬೆಲ್ಟ್ ಬೆಸ್ಟ್ ಅವಾರ್ಡ್ ಸಮಾರಂಭ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಸಮಾರಂಭವನ್ನು ಸಿಪಿಐ ಸಂಗಮನಾಥ ಹಿರೇಮಠ ಉದ್ಘಾಟಿಸಲಿದ್ದಾರೆ. ಪಟ್ಟಣ ಪಂಚಾಯಿತಿ ಅಧ್ಯಕ್ಷ ಪರಾಶರ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರಮಟ್ಟದ ಟೇಕ್ವಾಂಡೋ ರೆಫ್ರಿ ಗಿರೀಶ್, ತರಬೇತುದಾರ ರಾಜಶೇಖರ್, ಶಿವಕುಮಾರ್, ವೀರಪ್ಪಗೌಡ ಪಾಲ್ಗೊಳ್ಳಲಿದ್ದಾರೆ.
ವಿದ್ಯಾರ್ಥಿ ವೇತನ
ಕೊಪ್ಪ: ಜಿಲ್ಲಾ ಒಕ್ಕಲಿಗರ ಸಂಘದಿಂದ ಶನಿವಾರ ಬಾಳಗಡಿಯ ಒಕ್ಕಲಿಗರ ಸಭಾ ಭವನದಲ್ಲಿ ಶೃಂಗೇರಿ ಕ್ಷೇತ್ರಮಟ್ಟದ ಪ್ರತಿಭಾವಂತ ಒಕ್ಕಲಿಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಐ.ಎಂ. ಮಹೇಶ್.ಪ್ರಧಾನ ಕಾರ್ಯದರ್ಶಿ ಸದಾಶಿವ, ನಿರ್ದೇಶಕ ಶ್ರೀನಿವಾಸ್, ನಾರಯಣ್, ಲಕ್ಷ್ಮಣ ಗೌಡ, ಉತ್ತಮ,ಪ್ರಥಮ್, ಹಿಮಕೀರ್ತಿ, ವೆಂಕಟೇಶ್. ಶಿವಣ್ಣ, ಶೋಭಿಂತ್, ಕೊಪ್ಪ ತಾಲೂಕು ಒಕ್ಕಲಿಗ ಸಂಘದ ಕಾರ್ಯದರ್ಶಿ ಇನೇಶ್ ಇದ್ದರು.
ಪ್ರಾರಂಭೋತ್ಸವ
ಕಡೂರು: ಸೋಮವಾರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಎಮ್ಮೇದೊಡ್ಡಿ ರಸ್ತೆಯ ಕೆ. ಹೊಸಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರು ಸ್ಥಾಪಿತಗೊಂಡಿರುವ ವೀರಭದ್ರೇಶ್ವರ ಎಂಜಿನಿಯರಿಂಗ್ ವರ್ಕ್ಸ್ನ ಪ್ರಾರಂಭೋತ್ಸವವನ್ನು ಸಿರಿಗೆರೆ ಶಾಖಾ ಮಠ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಉಧ್ಘಾಟಿಸಲಿದ್ದಾರೆ. ಶಾಸಕ ಡಾ.ವೈ.ಸಿ. ವಿಶ್ವನಾಥ್ ಪ್ರಾರಂಭೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದಾರೆ. ತರೀಕೆರೆ ಶಾಸಕ ಸುರೇಶ್, ಬೆಂಗಳೂರು ದಕ್ಷಿಣ ಟಿಎಪಿಸಿಎಂಎಸ್ ಕಾರ್ಯದರ್ಶಿ ಸಣ್ಣಲಿಂಗಪ್ಪ, ಆಗಮಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

