ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ
ಮೂಡಿಗೆರೆ: ಇಲ್ಲಿನ ಪಟ್ಟಣ ಪಂಚಾಯತ್‌ನಲ್ಲಿ ಬಿಜೆಪಿ ನಡೆಸಿರುವ ದುರಾಡಳಿತದಿಂದ ಬೇಸತ್ತಿರುವ ಮತದಾರರು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನೀಡಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ. ಮನು ಹೇಳಿದರು.
ಸೋಮವಾರ ಮೂಡಿಗೆರೆ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ತೊರೆದು ಮರಳಿ ಕಾಂಗ್ರೆಸ್‌ಗೆ ಸೇರಿದ ಕೆ. ವೆಂಕಟೇಶ್, ಕೆ.ಟಿ. ಶ್ರೀಧರ್ ಹಾಗೂ ಬೆಂಬಲಿಗರ ಪಕ್ಷಕ್ಕೆ ವಿದ್ಯುಕ್ತವಾಗಿ ಬರ ಮಾಡಿಕೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಈಗಲೇ ಪಟ್ಟಣದ 11 ವಾರ್ಡ್‌ಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆದಿಲ್ಲ. ಜನರೊಂದಿಗೆ ಸಂಪರ್ಕ ಹೊಂದಿರುವ ಪ್ರಾಮಾಣಿಕ ಹಾಗೂ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಎಲ್ಲಾ ಸ್ಥಾನಗಳನ್ನು ಸಾರಾಸಗಟಾಗಿ ಗೆಲ್ಲುವುದು ನಮ್ಮ ಗುರಿ. ಫೆ.22ರಂದು 11 ರಿಂದ 12ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳು ಅಧಿಕೃತ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಕೆ. ವೆಂಕಟೇಶ್ ಮಾತನಾಡಿ, ಜೆಡಿಎಸ್ ಉತ್ತಮವಾದ ಪಕ್ಷಗಳಲ್ಲೊಂದಾಗಿದ್ದು, ಬೇಸರದಿಂದ ಆ ಪಕ್ಷವನ್ನು ತೊರೆಯಲಿಲ್ಲ. ಬದಲು ಜಾತ್ಯಾತೀತ ಶಕ್ತಿಯ ಮೇಲೆ ಅಪಾರ ಅಭಿಮಾನ ಇರುವ ಕಾರಣ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇವೆ ಎಂದರು.
ಗೋಷ್ಠಿಯಲ್ಲಿ ಜಿ.ಪಂ.ಸದಸ್ಯರಾದ ಎಂ.ಎಸ್. ಅನಂತ್, ಜ್ಯೋತಿ ಹೇಮಶೇಖರ್, ತಾ.ಪಂ.ಸದಸ್ಯ ಸಬ್ಲಿದೇವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಯು.ಎಚ್. ಹೇಮಶೇಖರ್, ಮಂಚೇಗೌಡ, ಜಯರಾಮ್, ನಾಗೇಶ್, ಡಿ.ಕೆ. ಉದಯಶಂಕರ್, ಡಿ.ಎಸ್. ರಘು, ಕಾಂಗ್ರೆಸ್ ನಗರ ಅಧ್ಯಕ್ಷ ಸಿ.ಕೆ. ಇಬ್ರಾಹಿಂ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಕ್ರಂ ಹಾಜಿ, ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಸುಭ್ರಮಣ್ಯ, ಮುಖಂಡರಾದ ಸುಂದರೇಶ್, ಮಹೇಶ್, ಮುಗ್ರಳ್ಳಿ ಸಂಪತ್, ಬಿಳಗುಳ ಸಂಪತ್, ರಾಜಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

