ಸ್ವಸಹಾಯ ಸಂಘಗಳಿಗೆ ಟ್ರಂಕ್ ವಿತರಣೆ
ತರೀಕೆರೆ: ವಿಕಸನ ಸಂಸ್ಥೆ, ನಬಾರ್ಡ್ ಬೆಂಗಳೂರು ವತಿಯಿಂದ ಸಮೀಪದ ಬೇಗೂರು ಗ್ರಾಮದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಟ್ರಂಕ್ ವಿತರಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ನಿಸರ್ಗ ಜಲಾನಯನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎಸ್. ಲಿಂಗರಾಜಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಮಹಿಳೆಯರು ಸ್ವಸಹಾಯ ಸಂಘಗಳನ್ನು ರಚನೆಗೊಳಿಸಿದ ನಂತರ ಆರ್ಥಿಕ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಸ್ವಸಹಾಯ ಸಂಘದ ದಾಖಲಾತಿಗಳನ್ನು ಇಟ್ಟುಕೊಳ್ಳಲು ಟ್ರಂಕ್ ತುಂಬಾ ಅನುಕೂಲವಾಗಿದೆ. ಮಹಿಳಾ ಸ್ವ ಸಹಾಯ ಸಂಘಗಳು ಸಾಮರ್ಥ್ಯ ಬಲವರ್ಧನೆ ಹೊಂದಲು ಅನುಕೂಲ ಎಂದರು.
ಸಾವಯವ ಕೃಷಿಕ ಈಶ್ವರಪ್ಪ, ಗರ್ಜೆ ಗಡೀಹಳ್ಳಿ, ಮುಗುಳಿ, ಅಣ್ಣಾಪುರ, ಗುಡ್ಡದಹಳ್ಳಿಯ ಮಹಿಳಾ ಸಂಘದ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಮಧು ಸ್ವಾಗತಿಸಿ, ವಿಕಸನ ಸಂಸ್ಥೆ ಸಂಯೋಜಕ ಮಾದಪ್ಪ ಕಾರ್ಯಕ್ರಮ ನಿರೂಪಿಸಿದರು. ಕುಮಾರಪ್ಪ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

