ಚಿಕ್ಕಮಗಳೂರು

ಗ್ರಾಪಂ ಅಧ್ಯಕ್ಷ, ಉಪಾಧ್ಯಕರ ಆಯ್ಕೆ

Published On :

ಚಿಕ್ಕಮಗಳೂರು: ತಾಲೂಕಿನ ಕರ್ತಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಟಿ.ಆರ್. ಪುಷ್ಪಕಲಾ ಕನಕರಾಜ್ ಮತ್ತು ಉಪಾಧ್ಯಕ್ಷರಾಗಿ ಕೆ.ಪಿ. ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಳೆದ ಅವಧಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಸ್.ಟಿ. ಮೀಸಲಾತಿ ನಿಗದಿಪಡಿಸಿದ್ದು, ಆ ವರ್ಗದ ಸದಸ್ಯರಿಲ್ಲದ ಕಾರಣ ಹಿಂದಿನ ಉಪಾಧ್ಯಕ್ಷೆ ಸುಶೀಲ ಪ್ರಭಾರ ಅಧ್ಯಕ್ಷರಾಗಿದ್ದರು. ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ತಹಸೀಲ್ದಾರ್ ವೀಣಾ ಈ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಘೋಷಿಸಿದರು.
8.5 ಕೋಟಿ ವೆಚ್ಚದ ಅಭಿವೃದ್ಧಿ: ನಂತರ ನಡೆದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿದ ಮಾತನಾಡಿದ ನೂತನ ಅಧ್ಯಕ್ಷೆ ಪುಷ್ಪಕಲಾ ಕನಕರಾಜ್, ಕಳೆದ 30 ವರ್ಷಗಳಿಂದಲೂ ಅಧಿಕಾರಕ್ಕಾಗಿ ವೈಷಮ್ಯದ ರಾಜಕಾರಣ ಮಾಡದೆ ಹಿರಿಯರ ಸಲಹೆ ಸಹಕಾರದಿಂದ ಗ್ರಾಮಗಳ ಏಳಿಗೆಗೆ ಶ್ರಮಿಸಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಜಿಲ್ಲಾ ಪಂಚಾಯಿತಿ ಸದಸ್ಯರ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಮಾದರಿ ಗ್ರಾಮ ಪಂಚಾಯಿತಿ: ಎಂಸಿ ಮಾಜಿ ಅಧ್ಯಕ್ಷ ಕೆ.ಪಿ. ವೆಂಕಟೇಶ್ ಮಾತನಾಡಿ,  ಜಿ.ಪಂ. ಸದಸ್ಯೆ ಭಾಗ್ಯ ರಂಗನಾಥ್, ಸಿಡಿಎ ಮಾಜಿ ಅಧ್ಯಕ್ಷ ಕೋಟೆ ರಂಗನಾಥ್, ತಾಲೂಕು ಪಂಚಾಯಿತಿ ಸದಸ್ಯರಾದ ಕೆ.ಆರ್. ಕನಕರಾಜ್, ನೀಲಮ್ಮ ಧರ್ಮೇಗೌಡ, ಎಪಿಎಂಸಿ ಸದಸ್ಯ ನಿಂಗೇಗೌಡ, ಮಾಜಿ ಅಧ್ಯಕ್ಷರಾದ ಅಣ್ಣೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜಯಣ್ಣ, ನಿಂಗೇಗೌಡ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದಿಸಿ ಮಾತನಾಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.