ಜನಪರ ಆಡಳಿತ ದಕ್ಷತೆ ಅಧಿಕಾರಿಗಳು ಅಗತ್ಯ
ನರಸಿಂಹರಾಜಪುರ: ಬಡ್ತಿ ಹೊಂದಿ ವರ್ಗಾವಣೆಗೊಂಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಮಂಜುನಾಥ್, ಜಿಲ್ಲಾ ಪಂಚಾಯ್ತಿ ಎಂಜಿನಿಯರ್ ಮಹೇಶ್ವರಪ್ಪ ಹಾಗೂ ನಿವೃತ್ತಿಗೊಂಡ ಸಹಾಯಕ ಕೃಷಿ ನಿರ್ದೇಶಕ ಓಂಕಾರಪ್ಪ ಅವರನ್ನು ತಾಲೂಕು ಪಂಚಾಯ್ತಿಯಿಂದ ಆತ್ಮೀಯವಾಗಿ ಬೀಳ್ಕೊಡುವ ಸಮಾರಂಭ ಸೋಮವಾರ ಸಾಮರ್ಥ್ಯಸೌಧದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿ ಅಧ್ಯಕ್ಷ ಜೆ.ಜಿ. ನಾಗರಾಜ್ ಮಾತನಾಡಿ, ಜನಪರ ಆಡಳಿತ ನೀಡಲು ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿದರೆ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ. ಈಗ ವರ್ಗಾವಣೆ ಹಾಗೂ ನಿವೃತ್ತಗೊಂಡ ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲೂಕು ಪಂಚಾಯ್ತಿ ಸದಸ್ಯ ಎಸ್.ಎಸ್. ಶಾಂತಕುಮಾರ್ ಮಾತನಾಡಿ, ಕೆಲವು ಸಂದರ್ಭ ಜನಪ್ರತಿನಿಧಿಗಳು ಅಧಿಕಾರಿಗಳಲ್ಲಿ ಕಠಿಣವಾಗಿ ಮಾತನಾಡಬೇಕಾಗುತ್ತದೆ. ಅದರ ಉದ್ದೇಶ ವೈಯಕ್ತಿಕ ದ್ವೇಷದಿಂದಲ್ಲ. ಬಡವರಿಗೆ ಅನುಕೂಲವಾಗಲಿ ಎಂಬ ಕಾಳಜಿಯಿಂದ ಮಾತನಾಡಿರುತ್ತೇವೆ ಎಂದರು.
ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ಮಾಡಿರುವುದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಮಂಜುನಾಥ್, ಸಹಾಯಕ ಕೃಷಿ ನಿರ್ದೇಶಕ ಓಂಕಾರಪ್ಪ, ಜಿಲ್ಲಾ ಪಂಚಾಯ್ತಿ ಎಂಜಿನಿಯರ್ ಮಹೇಶ್ವರಪ್ಪ ಕೃತಜ್ಞತೆ ಸಲ್ಲಿಸಿದರು. ಸಭೆಯಲ್ಲಿ ತಾಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್, ತಾಲೂಕು ಪಂಚಾಯ್ತಿ ಉಪಾಧ್ಯಕ್ಷೆ ಸುಮಿತ್ರ, ಸದಸ್ಯೆ ಉಮಾ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

