ಚಿಕ್ಕಮಗಳೂರು

ಸಚ್ಚಿದಾನಂದ ಸ್ವಾಮೀಜಿ ಶಿವದೀಕ್ಷೆಗೆ

Published On :

ಚಿಕ್ಕಮಗಳೂರು: ಇಲ್ಲಿನ ಶಾಂತಿನಗರ ಗ್ರಾಮದಲ್ಲಿ ಫೆ.20ರಂದು ನಡೆಯಲಿರುವ ಧಾರ್ಮಿಕ ಸಾಮೂಹಿಕ ಶಿವದೀಕ್ಷಾ  ಕಾರ್ಯಕ್ರಮಕ್ಕೆ ಹರಿಹರಪುರಮಠದ ಶ್ರೀಮದ್ ಜಗದ್ಗುರು ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 9 ಗಂಟೆಗೆ ಶಾಂತಿನಗರದ ಹೆಬ್ಬಾಗಿಲಿನರಸ್ತೆಯಿಂದ ಪೂರ್ಣಕುಂಭದೊಂದಿಗೆ ಮೆರವಣಿಗೆ ಪ್ರಾರಂಭವಾಗಲಿದೆ. ನಂತರದಲ್ಲಿ ಶ್ರೀಗಳು ಮಹಾಶಕ್ತಿ ಗಣಪತಿ ಮತ್ತು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಪೊಲೀಸ್ ಕಟ್ಟಡದ ಮುಂಭಾಗದ ಮೈದಾನದಲ್ಲಿ ಸಾಮೂಹಿಕ ಶಿವದೀಕ್ಷಾ ಕಾರ್ಯಕ್ರಮದಲ್ಲಿ ಪಂಚಾಕ್ಷರಿ ಮಹಾಮಂತ್ರ ಉಪದೇಶ ಮಾಡಿ ಶಿವದೀಕ್ಷೆ ನೀಡಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ರಾಜು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.