ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಆಯ್ಕೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಚುನಾವಣೆ ಸಂಬಂಧ ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದೆಂದು ಕೆಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಎಚ್.ಎಚ್. ದೇವರಾಜ್ ಹೇಳಿದ್ದಾರೆ.
ನಗರದ ಐ.ಜಿ. ರಸ್ತೆಯಲ್ಲಿರುವ ಜಿಲ್ಲಾ ಕೆಜೆಪಿ ಕಚೇರಿಯಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಅಂಗವಾಗಿ ಭಾನುವಾರ ನಡೆದ ಜಿಲ್ಲಾ ಮಟ್ಟದ ಕೆಜೆಪಿ ಯುವ ಘಟಕದ ಸಭೆಯಲ್ಲಿ ಮಾತನಾಡಿ, ಯುವಕರು ಸಮಾಜದ ಶಕ್ತಿಯಾಗಬೇಕು ಎಂದರೆ ಸಂಘಟನೆ ಮುಖ್ಯ. ಈ ಸಂಬಂಧ ವೈಚಾರಿಕ ಹಿನ್ನೆಲೆಯಲ್ಲಿ ಯುವ ಸಂಘಟನೆ ರೂಪಿಸಬೇಕು. ಕೆಲವು ಸಂಘಟನೆಗಳು ಮತೀಯ ಗಲಭೆ ಹುಟ್ಟು ಹಾಕಿ ಯುವಕರಿಗೆ ಆದ್ಯತೆ ನೀಡಿ ಯುವ ಜನತೆಯ ಬದುಕನ್ನು ನಾಶ ಮಾಡುತ್ತಿವೆ ಎಂದು ಆರೋಪಿಸಿದರು.
ರೈತರು, ಕಾರ್ಮಿಕರು, ವಿದ್ಯಾರ್ಥಿಗಳ ಸಮಸ್ಯೆ ಅರಿತು ಮಾನವ ಧರ್ಮ ಪ್ರತಿಪಾದನೆ ಮಾಡುವ ಮೂಲಕ ಜಾತ್ಯತೀತ, ಭ್ರಷ್ಟಾಚಾರರಹಿತ ಸಮಾಜ ಸೃಷ್ಟಿಸುವಲ್ಲಿ ಯುವಕರು ಮುಂದಾಗಬೇಕೆಂದರು.
ಪಣ ತೊಡೋಣ: ಈ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೂಲಕ ಭ್ರಷ್ಟಾಚಾರದ ವಿರುದ್ಧ ಆಂದೋಲನ ಪ್ರಾರಂಭಿಸಬೇಕು. ಕಾಂಗ್ರೆಸ್, ಜೆಡಿಎಸ್, ಬಿಜೆಪಿಯಿಂದ ಬಂದವರಿಗೆ ಮಣೆ ಹಾಕಿ ಕೆಲಸ ಮಾಡುವುದಿಲ್ಲ. ಸೈದ್ಧಾಂತಿಕ ಹಿನ್ನೆಲೆಯಲ್ಲಿ ದೇಣಿಗೆ ಸಂಗ್ರಹಿಸಿ ಚುನಾವಣೆ ಮಾಡಿ ಅಭ್ಯರ್ಥಿಗಳ ಗೆಲವಿಗೆ ಪಣ ತೊಡೋಣ ಎಂದರು.
ಯುವ ಘಟಕದ ಜಿಲ್ಲಾಧ್ಯಕ್ಷ ರಂಜನ್ ಅಜಿತ್ಕುಮಾರ್ ಮಾತನಾಡಿ, ಹೊಸ ಪಕ್ಷ ಎನ್ನುವ ಅಳುಕು ಬೇಡ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಡವರನ್ನು ನೆನಪಿನಲ್ಲಿಟ್ಟುಕೊಂಡು ಮಾಡಿದ ಸೈಕಲ್ ವಿತರಣೆ, ವೃದ್ದಾಪ್ಯ ವೇತನ, ಭಾಗ್ಯಲಕ್ಷ್ಮಿ ಯೋಜನೆ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಮತದಾರರ ಬಳಿ ಕೊಂಡೊಯ್ಯೋಣ ಎಂದರು.
ಗಲ್ಲಿ, ಗಲ್ಲಿಗಳಲ್ಲಿ ಶ್ರಮ ಹಾಕಿ ಯುವಜನರ ಮನಗೆದ್ದು ವಾರ್ಡ್ಗಳಲ್ಲಿ ಸಂಘಟನೆ ಬಲಪಡಿಸಿದರೆ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಉಪಾಧ್ಯಕ್ಷ ಜಮೀಲ್ ಅಹಮದ್, ಕ್ಷೇತ್ರ ಸಮಿತಿ ಅಧ್ಯಕ್ಷ ಹರೀಶ್, ಮುಖಂಡರಾದ ಕಿರಣ್ ಕುಮಾರ್, ಆದರ್ಶ, ರವಿ, ಸುಧಾಕರ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

