ಚಿಕ್ಕಮಗಳೂರು

ಕಲಶ ಪುನರ್ ಪ್ರತಿಷ್ಠಾಪನೆ

Published On :

ನರಸಿಂಹರಾಜಪುರ: ಕೂಸ್ಗಲ್ ರಂಗನಾಥಸ್ವಾಮಿ ಮತ್ತು ಪರಿವಾರ ದೇವರ ನೂತನ ದೇವಸ್ಥಾನ ಉದ್ಘಾಟನೆ ಮತ್ತು  ನೂತನ ಗರ್ಭಗುಡಿ, ಗೋಪುರ, ವಿಗ್ರಹಗಳು ಹಾಗೂ ಚೆನ್ನಮ್ಮದೇವಿಯ ನೂತನ ಗೋಪುರ ಹಾಗೂ ಕಲಶದ  ಪುನರ್ ಪ್ರತಿಷ್ಠಾಪನಾ ಮಹೋತ್ಸವ ಫೆ.21ರ ಗುರುವಾರ ಹಾಗೂ ಫೆ.22ರ ಶುಕ್ರವಾರ ನಡೆಯಲಿದೆ ಎಂದು  ಕೂಸ್ಗಲ್ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ವಿ. ಚಂದ್ರಶೇಖರ್ ತಿಳಿಸಿದ್ದಾರೆ.  
ಗುರುವಾರ ಸಂಜೆ 5 ಗಂಟೆಯಿಂದ ರಾಕ್ಷೋಘ್ನ ಹೋಮ, ವಾಸ್ತು ಹೋಮ, ದಿಗ್ಬಲಿ ಅದಿವಾಸ, ಆದಿವಾಸ  ಹೋಮ ಮುಂತಾದ ಧಾರ್ಮಿಕ ಕಾರ್ಯಕ್ರಗಳು ನಡೆಯಲಿದೆ. ಶುಕ್ರವಾರ ಮದ್ಯಾಹ್ನ 12 ಗಂಟೆಗೆ ಕೂಸ್ಗಲ್ ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ಸಭೆ  ನಡೆಯಲಿದೆ. ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ವಿ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಡಿ.ಎನ್. ಜೀವರಾಜ್, ಸಂಸದ ಜಯಪ್ರಕಾಶಹೆಗ್ಡೆ, ವಿಧಾನಪರಿಷತ್ ಸದಸ್ಯ ಎಂ. ಶ್ರೀನಿವಾಸ್ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.