ಪಪಂ ಚುನಾವಣೆಗೆ ಸಿದ್ಧಗೊಳ್ಳುತ್ತಿರುವ ವಿವಿಧ ಪಕ್ಷಗಳು
ನರಸಿಂಹರಾಜಪುರ: ಪಟ್ಟಣ ಪಂಚಾಯ್ತಿಯ 11 ಸ್ಥಾನಗಳ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿದ್ದರೂ, ಮಂಗಳವಾರದವರೆ ಒಂದೂ ನಾಮಪತ್ರ ಸಲ್ಲಿಕೆಯಾಗಿಲ್ಲ.
ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ಚುನಾವಣಾ ಕಚೇರಿ ತೆರೆಯಲಾಗಿದೆ. ಅಕ್ಷರ ದಾಸೋಹ ಯೋಜನೆಯ ಸಹಾಯ ನಿರ್ದೇಶಕ ಬಿ.ಜಿ. ಮಾಳಮ್ಮನವರ್ ಚುನಾವಣಾಧಿಕಾರಿಯಾಗಿದ್ದಾರೆ. ತಾಲೂಕು ಕಚೇರಿಯ ಎಚ್.ಎಂ. ನಾಗರಾಜ್ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶನಿವಾರ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಫೆ.23 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದೆ. ಫೆ.25 ರಂದು ನಾಮಪತ್ರ ಪರಿಶೀಲನೆ ಹಾಗೂ 27ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.
ಮಾರ್ಚ್ 7ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 11 ರಂದು ತಾಲೂಕು ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದೆ.
ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದ್ದು, ರಾಜಕೀಯ ಪಕ್ಷಗಳ ಮುಖಂಡರಿಗೆ ಅಭ್ಯರ್ಥಿಗಳ ಆಯ್ಕೆ ಸಮಸ್ಯೆಯಾಗಲಿದೆ. ಬಂಡಾಯ ಅಭ್ಯರ್ಥಿಗಳ ಸಂಖ್ಯೆಯೂ ಹೆಚ್ಚುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ನವರು ಪ್ರತ್ಯೇಕ ಸಭೆ ನಡೆಸಿದ್ದು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಪಕ್ಷದ ಕಚೇರಿಗಳಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ವಿಧಾನಸಭೆ ಚುನಾವಣೆಗೆ ದಿಕ್ಷೂಚಿಯಾಗುವ ಚುನಾವಣೆ ಎಂದೇ ಬಿಂಬಿತವಾದ ಪಪಂ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗುವ ಎಲ್ಲಾ ಸಾದ್ಯತೆಗಳು ಕಂಡು ಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

