ಚಿಕ್ಕಮಗಳೂರು

ಕರಾಟೆ ಬೆಲ್ಟ್ ಆವಾರ್ಡ್

Published On :

ಶೃಂಗೇರಿ: ಪಟ್ಟಣದ ಜೆಸಿಬಿಎಂ ಕಾಲೇಜಿನ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಟೇಕ್ವಾಂಡೋ ಮಾರ್ಷಲ್ ಆರ್ಟ್ ಕರಾಟೆ ಸ್ಕೂಲ್ ವಿದ್ಯಾರ್ಥಿಗಳ ಬೆಲ್ಟ್ ಬೆಸ್ಟ್ ಅವಾರ್ಡ್ ಸಮಾರಂಭ 24 ರಂದು ನಡೆಯಲಿದೆ.  ಸಿಪಿಐ ಎಸ್.ಎಸ್. ಹಿರೇಮಠ ಬೆಳಿಗ್ಗೆ 11 ಗಂಟೆಗೆ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಪರಾಶರ ಅಧ್ಯಕ್ಷತೆ ವಹಿಸಲಿದ್ದಾರೆ. ಗಿರೀಶ್, ಶಿವಕುಮಾರ್, ವೀರಪ್ಪಗೌಡ, ರಾಜಶೇಖರ್ ಪಾಲ್ಗೊಳ್ಳಲಿದ್ದಾರೆ.
ಸೂರ್ಯ ನಮಸ್ಕಾರ
ಶೃಂಗೇರಿ: ಪಟ್ಟಣದ ಶ್ರೀ ಮಠದ ಆವರಣದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಶ್ರಯದಲ್ಲಿ ರಥಸಪ್ತಮಿ ಅಂಗವಾಗಿ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು. ಸಮಿತಿಯ ಉಪಾಧ್ಯಕ್ಷ ನಾಗೇಶ್ ಕಾಮತ್, ಟಿ. ರವಿಕುಮಾರ್, ಪೂರ್ಣಿಮಾ ಸಿದ್ದಪ್ಪ, ಗುರುರಾಜ್, ವೀರಪ್ಪಗೌಡ ಸೇರಿದಂತೆ 40 ಕ್ಕೂ ಅಧಿಕ ಯೋಗಬಂದುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಬಡ್ಡಿ ಪಂದ್ಯಾವಳಿ ನಾಳೆ ಉದ್ಘಾಟನೆ
ಭದ್ರಾವತಿ: ಕುವೆಂಪು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ಭದ್ರಾವತಿಯ ಸರ್ ಎಂ.ವಿ. ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ 22ರಂದು ನಡೆಸಲಿದ್ದು ಇದರ ಉದ್ಘಾಟನಾ ಸಮಾರಂಭ ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
 ಈ ಪಂದ್ಯಾವಳಿಯಲ್ಲಿ ಸುಮಾರು 16 ತಂಡಗಳು ಭಾಗವಹಿಸಲಿದ್ದು ಸರ್.ಎಂ.ವಿ. ಸರ್ಕಾರಿ ವಿಜ್ಞಾನ ಕಾಲೇಜು ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ಸಹ ಅವರು ತಿಳಿಸಿದ್ದಾರೆ.
 ಪಂದ್ಯಾವಳಿಯನ್ನು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ. ಡಿ.ವಿ.ಸುರೇಶ್ ಗುಪ್ತಾ ಉದ್ಘಾಟಿಸುವರು. ಕುವೆಂಪು ವಿ.ವಿ. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಸ್.ಎಂ.ಪ್ರಕಾಶ್, ಕಾರ್ಪೋರೇಶನ್ ಬ್ಯಾಂಕಿನ ಜನ್ನಾಪುರ ಶಾಖೆಯ ಮುಖ್ಯಪ್ರಬಂಧಕ ಬಿ.ಎಸ್. ಮಹೇಶ್ವರಪ್ಪ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಸಿ. ಮಾಯಣ್ಣ ಭಾಗವಹಿಸುವರು. ಪ್ರಾಂಶುಪಾಲ ಪ್ರೊ. ಭಟ್ಟರ ಲಕ್ಷ್ಮಣ್ ಶಿದ್ರಾಮಪ್ಪ ಅಧ್ಯಕ್ಷತೆ ವಹಿಸುವರು.
 ಸಮಾರೋಪ ಸಮಾರಂಭ ಕಾಲೇಜು ಆವರಣದಲ್ಲಿ 23ರ ಶನಿವಾರ ನಡೆಯಲಿದ್ದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯ ವಿಶೇಷ ಅಧಿಕಾರಿ ಪ್ರೊ. ಎಚ್.ಮಂಜುನಾಥ್ ಬಹುಮಾನ ವಿತರಣೆ ಮಾಡುವರು. ಕುವೆಂಪು ವಿ.ವಿ. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಸ್.ಎಂ.ಪ್ರಕಾಶ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಸಿ. ಮಾಯಣ್ಣ ಮತ್ತು ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಜಿ.ಚನ್ನಬಸಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.