ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ
ಚಿಕ್ಕಮಗಳೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಜವಬ್ದಾರಿ ಎಂದು ತಾಪಂ ಮಾಜಿ ಉಪಾಧ್ಯಕ್ಷೆ ರೀನಾ ಶಿವರಾಜ್ ಹೇಳಿದ್ದಾರೆ.
ಹೆಚ್ಚಿನ ವಿದ್ಯಾಭ್ಯಾಸ: ತಾಲೂಕಿನ ಹೊಸಪೇಟೆ ಅರುಣೋದಯ ವಿದ್ಯಾಸಂಸ್ಥೆ ಆವರಣದಲ್ಲಿ ಇತ್ತೀಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ವಿದ್ಯಾಸಂಸ್ಥೆ ಉತ್ತಮ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇದಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸ ನೀಡಿ ಯುಶಸ್ಸು ಗಳಿಸಲಿ ಎಂದು ಹಾರೈಸಿದರು.
ಶ್ರಮವಹಿಸಿ: ತೊಗರಿಹಂಕಲ್ ಗ್ರಾಪಂ ಅಧ್ಯಕ್ಷೆ ಪವಿತ್ರ ಮಾತನಾಡಿ, ಸಂಸ್ಥೆ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಸಾಧಿಸಿ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸ ನೀಡಿ ಅವರನ್ನು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಶಿಕ್ಷಕರು ಶ್ರಮವಹಿಸಿ ಎಂದರು. ಕಾಮನದುರ್ಗ ಗ್ರಾಪಂ ಅಧ್ಯಕ್ಷ ಸಿ. ದೇವರಾಜ್ ಮಾತನಾಡಿ, ಮಕ್ಕಳಿಗೆ ವಿದ್ಯೆ ಎಂಬ ಆಸ್ತಿಯನ್ನು ಕೊಡಿಸಿ ಶಿಸ್ತು ನಡವಳಿಕೆ ಗುರು ಹಿರಿಯರಿಗೆ ಗೌರವ ಕೊಡಬೇಕು ಎಂದು ಹೇಳಿದರು.
ಎಚ್.ವಿ. ದೇವರಾಜ್ ಮಾತನಾಡಿ, ಮಕ್ಕಳಿಗೆ ಆಧ್ಮಾತ್ಮಿಕ ವಿಚಾರವನ್ನು ಮನದಟ್ಟು ಮಾಡಿದಲ್ಲಿ ಜೀವನದ ಎಡೆಗೆ ಸಹಕಾರ ಆಗುತ್ತದೆ. ವಿದ್ಯಾಸಂಸ್ಥೆ ಉತ್ತಮವಾಗಿ ಬೆಳೆಯುತ್ತಿದೆ. ಇನ್ನು ಹೆಚ್ಚಿನ ಮಟ್ಟದಲ್ಲಿ ಬೆಳೆದು ಸಂಸ್ಥೆಯ ಹೆಸರು ರಾಜ್ಯಾದಂತ ರಾರಾಜಿಸಲಿ ಎಂದು ಹೇಳಿದರು. ದಾನಿ ಅಪ್ಪಿಯಮ್ಮ, ತೊಗರಿಹಂಕಲ್ ಗ್ರಾಪಂ ಸದಸ್ಯರಾದ ಸೀತಾ ಶಿವಕುಮಾರ್, ಚಂದ್ರಕಲಾ ವಾಸುಕುಮಾರ್, ಪೋಷಕರ ಸಮಿತಿಯ ಆಶಾಲತಾ ಸೋಮಶೇಖರ್ ಮಾತನಾಡಿದರು.
ಅರುಣೋದಯ ವಿದ್ಯಾಸಂಸ್ಥೆ ಅಧ್ಯಕ್ಷ ಮುರುಗೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ಸುಂದರ್, ಪನ್ನೀರ್, ಕಾಫಿ ಬೆಳೆಗಾರ ಕಂದಸ್ವಾಮಿ, ಬಿಲ್ಲವ ಸಮಾಜದ ಜಗನ್ನಾಥ್ ಇದ್ದರು. ಶಿಕ್ಷಕಿ ವಾಣಿ ಸ್ವಾಗತಿಸಿ, ಗೋಪಾಲ್ ಕಾರ್ಯಕ್ರಮ ನಿರೂಪಿಸಿದರು, ಮುಖ್ಯೋಪಾಧ್ಯಾಯ ಯಶವಂತ್ ವಂದಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

