ಚಿಕ್ಕಮಗಳೂರು

ಕಾವೇರಿ ತೀರ್ಪು: ಎಲ್‌ಐಸಿ ಕಚೇರಿಗೆ ಮುತ್ತಿಗೆ

Published On :

ಚಿಕ್ಕಮಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಐತೀರ್ಪು ಹೊರಡಿಸಿ ಗೆಜೆಟ್‌ನಲ್ಲಿ ಪ್ರಕಟಣೆ ಮಾಡಿರುವುದನ್ನು ಕಂಡಿಸಿ ಕರವೇ ಕಾರ್ಯಕರ್ತರು ಇಲ್ಲಿನ ಭಾರತೀಯ ಜೀವ ವಿಮಾ ನಿಗಮದ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿ ಒಂದು ಗಂಟೆಗೂ ಹೆಚ್ಚು ಕಾಲ ನೌಕರರನ್ನು ದಿಗ್ಬಂಧನ ಹಾಕಿ ಪ್ರತಿಭಟಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್, ಕರ್ನಾಟಕದ ಜೀವನದಿ ಕಾವೇರಿ ವಿಚಾರವಾಗಿ ಇಂದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಪ್ರತಿ ವರ್ಷ ಕಾವೇರಿ ನೀರನ್ನು 192 ಟಿ.ಎಂ.ಸಿ. ನೀರನ್ನು ಬಿಡಬೇಕು, ಕಾವೇರಿ ನದಿ ಪ್ರಾಧಿಕಾರದ ಅಧಿಕಾರ ಕೇಂದ್ರ ಸರ್ಕಾರದ್ದೆ ಎಂದು ಸುಪ್ರೀಂಕೋರ್ಟ್‌ಗೆ ಅಂತಿಮ ನಿರ್ಧಾರದ ಪ್ರತಿಯನ್ನು ಸಲ್ಲಿಸಿದ್ದಾರೆ.
   ಇದರಿಂದ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ರಾಜಕೀಯ ಉದ್ದೇಶಕ್ಕಾಗಿ ಕೇಂದ್ರ ತಮಿಳುನಾಡು ಪರವಾಗಿ ನಿಂತಿರುವುದು ಅಕ್ಷಮ್ಯ ಅಪರಾಧ ಎಂದರು.
ಮುತ್ತಿಗೆ ಹಾಕಲಿದ್ದೇವೆ: ಕಾವೇರಿ ನೀರು ಕರ್ನಾಟಕದ ಪಾಲಿಗೆ ಸಿಗಬೇಕು, ಕೇಂದ್ರ ಸರ್ಕಾರ ಕೂಡಲೇ ರಾಜ್ಯದ ಕ್ಷಮೆ ಕೋರುವುದರ ಜೊತೆಗೆ ಸುಪ್ರೀಂ ಕೋರ್ಟ್‌ಗೆ ನೀಡಿರುವ ಪ್ರತಿಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸುತ್ತದೆ.
   ತಕ್ಷಣವೇ ಸಮಸ್ಯೆ ಬಗೆಹರಿಸದಿದ್ದರೆ ರೈಲು ತಡೆದು ಪ್ರತಿಭಟನೆ ಮಾಡುವುದರ ಜೊತೆಗೆ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ದೆಹಲಿಯ ಸಂಸತ್ ಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.
   ಈ ವಿಚಾರವಾಗಿ ರಾಜ್ಯ ಸರ್ಕಾರವು ಜನರಿಗೆ ಮೋಸ ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಅಶೋಕ್, ನಗರಾಧ್ಯಕ್ಷ ನವೀನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹೇಶ್, ಪ್ರಧಾನ ಕಾರ್ಯದರ್ಶಿ ವಸಂತ್‌ಕುಮಾರ್, ಇರ್ಷದ್, ಭರತ್ ರಾಜ್, ಮನೋಜ್ ಸೇರಿದಂತೆ ಹಲವಾರು ಕಾರ್ಯಕರ್ತರು ಈ ಸಂದರ್ಭದಲ್ಲಿ  ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.