ಪಪಂ ಚುನಾವಣೆ: ಒಂದು ನಾಮಪತ್ರ ಸಲ್ಲಿಕೆ
ನರಸಿಂಹರಾಜಪುರ: ಪಟ್ಟಣ ಪಂಚಾಯ್ತಿ ಚುನಾವಣೆಗೆ 9 ನೇ ವಾರ್ಡಿನ ಸಾಮಾನ್ಯ ಸ್ಥಾನಕ್ಕಾಗಿ ಜೆಡಿಎಸ್ ಪಕ್ಷದ ನಾಗಭೂಷಣ್ ಎಂಬುವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ಶನಿವಾರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದರೂ ಮಂಗಳವಾರದವರೆಗೂ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಬುಧವಾರ ಪ್ರಥಮವಾಗಿ ಒಂದು ನಾಮ ಪತ್ರ ಬಂದಿದೆ.ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬುಧವಾರ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದವು.
ಪ್ರಮುಖರ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ಡಿ.ಎನ್. ಜೀವರಾಜ್ ನೇತೃತ್ವದಲ್ಲಿ ಬಿಜೆಪಿ ಮುಖಂಡರ ಸಭೆ ನಡೆಯಿತು. ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆದಿದೆ.
ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯು ಪಕ್ಷದ ಕಚೇರಿಯಲ್ಲಿ ನಡೆದು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿತು.
ಟಿಕೆಟ್ ಆಕಾಂಕ್ಷಿಗಳಿಗೆ 19 ರ ಒಳಗೆ ಪಕ್ಷದ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಕಾಂಗ್ರೆಸ್ ಪಕ್ಷವು ಸೂಚಿಸಿತ್ತು. 11 ಸ್ಥಾನಗಳಿಗೆ 26 ಅರ್ಜಿಗಳು ಬಂದಿದ್ದು, 3 ಅಭ್ಯರ್ಥಿಗಳು ತಲಾ ಎರಡು ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಬುಧವಾರ ಸಂಜೆಯ ಒಳಗೆ ಅಂತಿಮ ಪಟ್ಟಿ ತಯಾರಿಸಿ ಜಿಲ್ಲಾ ಸಮಿತಿಗೆ ಕಳಿಸಲಾಗುವುದು. ಗುರುವಾರ ಸಂಜೆಯೊಳಗೆ ಅಭ್ಯರ್ಥಿಯ ಆಯ್ಕೆ ಪೂರ್ಣಗೊಳ್ಳಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
4483 ಮತದಾರರು: 2012 ರ ಮತದಾರರ ಪಟ್ಟಿಯಂತೆ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ 4483 ಮತದಾರರಿದ್ದಾರೆ. ಇವರಲ್ಲಿ 2281 ಪುರುಷ ಮತದಾರರು ಹಾಗೂ 2202 ಮಹಿಳಾ ಮತದಾರರಿದ್ದಾರೆ. ಪಟ್ಟಣ ಪಂಚಾಯ್ತಿಯಲ್ಲಿ 11 ವಾರ್ಡುಗಳಿವೆ.1 ನೇ ವಾರ್ಡ್ ಸಾಮಾನ್ಯ ಮಹಿಳೆ,2 ನೇ ವಾರ್ಡ್ ಪರಿಶಿಷ್ಟ ಜಾತಿ, 3 ನೇ ವಾರ್ಡ್ ಸಾಮಾನ್ಯ, 4 ನೇ ವಾರ್ಡ್ ಪರಿಶಿಷ್ಟ ಪಂಗಡ (ಮಹಿಳೆ) 5 ನೇ ವಾರ್ಡ್ ಹಿಂದುಳಿದ ವರ್ಗ (ಎ) ಮಹಿಳೆ, 6 ನೇ ವಾರ್ಡ್ ಸಾಮಾನ್ಯ, 7 ನೇ ವಾರ್ಡ್ ಪರಿಶಿಷ್ಟ ಜಾತಿ (ಮಹಿಳೆ) 8 ನೇ ವಾರ್ಡ್ ಹಿಂದುಳಿದ ವರ್ಗ (ಎ) 9 ನೇ ವಾರ್ಡ್ ಸಾಮಾನ್ಯ, 10 ನೇ ವಾರ್ಡ್ ಹಿಂದುಳಿದ ವರ್ಗ (ಬಿ) ಮಹಿಳೆ, 11 ನೇ ವಾರ್ಡ್ ಹಿಂದುಳಿದ ವರ್ಗ (ಎ).
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

