ಚಿಕ್ಕಮಗಳೂರು

ಉಚಿತ ಸಿಇಟಿ ತರಬೇತಿ

Published On :

ಚಿಕ್ಕಮಗಳೂರು: ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನಗರದ ಐಡಿಎಸ್‌ಜಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಉಚಿತವಾಗಿ ತರಬೇತಿ ನೀಡಲಾಗುವುದು ಎಂದು ಐಡಿಎಸ್‌ಜಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸೌಹಾರ್ದ ಪರಿಷತ್ ಅಧ್ಯಕ್ಷ ಅಶ್ವಾಕ್ ಅಹ್ಮದ್ ಹೇಳಿದ್ದಾರೆ.
ನಗರದ ಭುವನೇಂದ್ರ ವಿದ್ಯಾಸಂಸ್ಥೆಯಲ್ಲಿ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸೌಹಾರ್ದ ಪರಿಷತ್‌ನಿಂದ ಏರ್ಪಡಿಸಿದ್ದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಪ್ರತಿ ವರ್ಷ ಏರ್ಪಡಿಸಲಾಗುತ್ತಿದೆ. ಸಂಘದ ಸದಸ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಸಂಘದ ಏಳಿಗೆಗೆ ಶ್ರಮಿಸಬೇಕು ಎಂದರು.
ಸಾರಿಗೆ ರಿಯಾಯಿತಿ ಪಡೆಯಲು ಅನುಕೂಲವಾಗುವಂತೆ ಹಿರಿಯ ನಾಗರಿಕರಿಗೆ ಸಂಘದಿಂದ ಗುರುತಿನ ಚೀಟಿ ವಿತರಿಸುವುದರ ಜೊತೆಗೆ ಈ ವರ್ಷ ಹತ್ತು ಸಾವಿರಕ್ಕೂ ಹೆಚ್ಚು ಸದಸ್ಯರನ್ನು ನೊಂದಣಿ ಮಾಡಲಾಗುವುದು ಎಂದು ಹೇಳಿದರು. ಕಾರ್ಯದರ್ಶಿ ಸಿ.ಎಸ್. ಶ್ರೀನಿವಾಸ್, ಖಜಾಂಚಿ ಮಂಜಪ್ಪ, ಬೆಂಗಳೂರಿನ ವೈದ್ಯ ಡಾ. ನಾಗೇಂದ್ರ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.