ಒಮ್ಮತದಿಂದ ಚುನಾವಣೆ ಎದುರಿಸಿ
ಚಿಕ್ಕಮಗಳೂರು: ಮೈಮನಸ್ಸನ್ನು ಬಿಟ್ಟು ಹೊಂದಾಣೆಕೆಯಿಂದ ಚುನಾವಣೆ ಎದುರಿಸಬೇಕು ಎಂದು ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.
ನಗರ ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ನಗರದ ಲಯನ್ಸ್ ಸೇವಾ ಭವನದಲ್ಲಿ ಬುಧವಾರ ಸಂಜೆ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿರಿಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಒಂದೊಂದು ವಾರ್ಡ್‌ನಲ್ಲಿ 2 ಕ್ಕಿಂತ ಹೆಚ್ಚು ಜನರು ಆಕಾಂಕ್ಷಿಗಳಿದ್ದಲ್ಲಿ ಅವರನ್ನು ಒಟ್ಟಿಗೆ ಕೂರಿಸಿ ಚರ್ಚಿಸಿ ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದರು.
ಹೊಂದಾಣಿಕೆ: ಕೆಪಿಸಿಸಿ ಕಾರ್ಯದರ್ಶಿ ಹಸನಬ್ಬ ಮಾತನಾಡಿ, ನಿಷ್ಠಾವಂತರು, ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು. ಒಳ್ಳೆಯ ಕೆಲಸ ಮಾಡುವರರನ್ನು ಆಯ್ಕೆ ಮಾಡಿ, ಯುವಕರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕೆಪಿಸಿಸಿಯ ನಿರ್ದೇಶನವಿದೆ ಎಂದರು. ಕೇಂದ್ರದ ಮಾಜಿ ಸಚಿವೆ ತಾರಾದೇವಿ ಸಿದ್ದಾರ್ಥ ಮಾತನಾಡಿ, ಅರ್ಜಿ ಹಾಕಿದವರನ್ನು ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಇದು, ಮಿನಿ ವಿಧಾನಸಭಾ ಚುನಾವಣೆಯಾಗಿದ್ದು ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸುವುದು ಸೂಕ್ತವೆಂದರು.
ಉತ್ತಮ ಪ್ರತಿಕ್ರಿಯೆ: ವಿಧಾನಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ ಮಾತನಾಡಿ, ಆಕಾಂಕ್ಷಿಗಳ ಬಗ್ಗೆ ಸ್ಥಳೀಯವಾಗಿ ಪರಿಶೀಲಿಸಿ ಟಿಕೆಟ್ ನೀಡಬೇಕಿದ್ದು, ಸ್ಥಳೀಯ ಸಮಸ್ಯೆಗಳನ್ನು ಮುಂದಿಟ್ಟಿಕೊಂಡು ಚುನಾವಣಿ ಎದುರಿಸಿ ಜಯಗಳಿಸಬಹುದೆಂದರು. ಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ, ಪಕ್ಷಕ್ಕೆ ಬದ್ದತೆಯಿರುವ, ಜನಪ್ರಿಯ ವ್ಯಕ್ತಿಗಳಿಗೆ ಸ್ಪರ್ಧಿಸಲು ಅವಕಾಶ ನೀಡಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯಾಧ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ. ಈ ಸಂದರ್ಭದಲ್ಲಿ ಮುಖಂಡರು, ಕಾರ್ಯಕರ್ತರು ಹೊಂದಾಣಿಕೆಯಿಂದ ಕಾರ್ಯನಿವಹಿಸುವುದು ಸೂಕ್ತವೆಂದರು.
ಈ ಸಂದರ್ಭದಲ್ಲಿ ಇಂದಾವರ ಗ್ರಾಪಂ ಮಾಜಿ ಅಧ್ಯಕ್ಷ ಸಂಪತ್ ರಾಜ್ ಹಾಗೂ ಅವರ ಪತ್ನಿ ನಗರಸಭಾ ಮಾಜಿ ಸದಸ್ಯೆ ಸುರೇಖಾ ಸಂಪತ್ ರಾಜ್ ಕಾಂಗ್ರೆಸ್ ಸೇರಿದರು. ಡಾ.ಡಿ.ಎಲ್. ವಿಜಯಕುಮಾರ್, ಬಿ.ಎಲ್. ರಾಮದಾಸ್, ಕಡೂರು ಸಿ. ನಂಜಪ್ಪ, ಹಾಲಪ್ಪಗೌಡ, ಚಂದ್ರೇಗೌಡ, ವನಮಾಲ ಮೃತುಂಜಯ, ಸಚಿನ್ ಮೀಗಾ, ವಿಶ್ವನಾಥ್, ನಾಗರತ್ನ, ದೋರನಾಳ್ ಪರಮೇಶ್ ಉಪಸ್ಥಿತರಿದ್ದರು.
ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಕೆ. ಮಹಮದ್ ಸ್ವಾಗತಿಸಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಕಾರ್ಯಕ್ರಮ ನಿರೂಪಿಸಿ, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

