ಪಕ್ಷ ತೊರೆಯುವುದು ಗಾಳಿ ಸುದ್ದಿ
ಕಡೂರು: ತಾವು ಪಕ್ಷ ತೊರೆಯದೇ ಬಿಜೆಪಿ ಶಾಸಕನಾಗಿಯೇ ಮುಂದುವರಿದು ತಮ್ಮ ನೇತೃತ್ವದಲ್ಲಿಯೇ ಬಿಜೆಪಿಯಿಂದ ಕಡೂರು ಹಾಗು ಬೀರೂರು ಪುರಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲಾಗುವುದು ಎಂದು ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಡಾ ವೈ.ಸಿ. ವಿಶ್ವನಾಥ್ ಹೇಳಿದರು.
ಕಡೂರು ಪಟ್ಟಣದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಬಿಜೆಪಿ ತೊರೆದು ಕೆಜೆಪಿಗೆ ಹೋಗುವುದಿಲ್ಲ ತಾವು ಕೆಜೆಪಿ ಪಕ್ಷಕ್ಕೆ ಹೋಗುತ್ತೇನೆ ಎಂಬ ಸುದ್ದಿ ಸುಳ್ಳು. ನಾನು ಬಿಜೆಪಿ ಪಕ್ಷದ ಶಾಸಕನಾಗಿದ್ದು ಬಿಜೆಪಿಯಿಂದಲೇ ಕಡೂರು ಬೀರೂರು ಪುರಸಭೆಗಳ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ, ಈ ಸ್ಥಳೀಯ ಸಂಸ್ಥೆಯ ಚುನಾವಣೆ ಎದುರಿಸುತ್ತೇನೆ ಎಂದರು.
ಸೂಕ್ತ ಸಮಯದಲ್ಲಿ ನಿರ್ಧಾರ: ಸದ್ಯಕ್ಕೆ ತಾವು ಬಿಜೆಪಿ ತೊರೆಯುವುದಿಲ್ಲ. ಮೇ 5 ರ ತನಕ ತಮ್ಮ ಶಾಸಕಗಿರಿಯ ಅವಧಿಯಿದ್ದು, ನಂತರ ಈ ಬಗ್ಗೆ ಸೂಕ್ತ ಸಮಯದಲ್ಲಿ ನನ್ನ ನಿರ್ಧಾರ ತಿಳಿಸುತ್ತೇನೆ. ಸದ್ಯದಲ್ಲಿಯೇ ಬಿಜೆಪಿ ತೊರೆಯುತ್ತೇನೆ ಎಂಬುದು ಕೇವಲ ಗಾಳಿಸುದ್ದಿ ಎಂದರು.
ತಾವು ಕೇವಲ ರಾಜಕಾರಣ ಮಾಡದೆ ಕ್ಷೇತ್ರದ ಅಭಿವೃದ್ಧಿ ಹಿತದೃಷ್ಟಿಯಿಂದ ಕ್ಷೇತ್ರದ ಶಾಸಕನಾಗಿ ಕ್ಷೇತ್ರಕ್ಕೆ ಮಾಡಬೇಕಾಗಿರುವ ಸಾಕಷ್ಟು ಅಭಿವೃದ್ಧಿ ಕಾರ್ಯ ಬಾಕಿಯಿದ್ದು, ನನಗೆ ಸಿಕ್ಕಿರುವ ಅವಧಿಯಲ್ಲಿ ಕ್ಷೇತ್ರದ ಜನರ ಅಭಿವೃದ್ಧಿಗಾಗಿ ದುಡಿಯಲು ಬಳಸಿಕೊಳ್ಳುತ್ತೇನೆ ಎಂದರು.
ಸ್ವತಂತ್ರರು: ಬಿಜೆಪಿಯಿಂದ ನಿಮ್ಮ ಬೆಂಲಲಿಗರಾಗಿದ್ದ ಹಲವರು ಕೆಜೆಪಿಗೆ ಸೇರ್ಪಡೆಯಾಗಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬೇರೆ ಬೇರೆ ಪಕ್ಷಗಳಿಗೆ ಹೋಗಲು ಎಲ್ಲರೂ ಸ್ವತಂತ್ರರಾಗಿದ್ದಾರೆ ಈ ಹಿನ್ನೆಲೆಯಲ್ಲಿ ಕೆಲವರು ಹೋಗಿರಬಹುದು ಎಂದರು.
ಈ ಬಾರಿ ಕಡೂರು ಹಾಗೂ ಬೀರೂರು ಪುರಸಭೆಗಳಲ್ಲಿ ಕನಿಷ್ಠ ಹತ್ತಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವಂತೆ ಸೂಕ್ತ ಅಭ್ಯರ್ಥಿಗಳನ್ನು ಕಣ್ಕಕಿಳಿಸಿ ಬಿಜೆಪಿ ಈ ಎರಡೂ ಪುರಸಭೆಗಳಲ್ಲಿ ಅಧಿಕಾರದ ಗದ್ದುಗೆ ಹಿಡಿಯುವಂತೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಬಿಜೆಪಿ ಮುಖಂಡ ಜಿಗಣೇಹಳ್ಳಿ ಮಂಜು, ಜಿ. ಈಶ್ವರಪ್ಪ ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

