ವೇತನ ತಾರತಮ್ಯ ನಿವಾರಣೆಗೆ ಆಗ್ರಹ
ಚಿಕ್ಕಮಗಳೂರು: ಬೆಲೆ ಏರಿಕೆ ಹಾಗೂ ವೇತನ ತಾರತಮ್ಯ ನಿವಾರಣೆ ಮಾಡುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ರಾಷ್ಟ್ರ ವ್ಯಾಪಿ ನೀಡಿದ್ದ ಎರಡು ದಿನಗಳ ಮುಷ್ಕರದ ಅಂಗವಾಗಿ ಗುರುವಾರ ವಿವಿಧ ಬ್ಯಾಂಕ್ಗಳ ಅಧಿಕಾರಿಗಳು ಹಾಗೂ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಘೋಷಣೆ ಹಾಕಿದರು.
ಬೆಲೆ ಏರಿಕೆ ನಿಯಂತ್ರಿಸಿ: ಬೆಲೆ ಏರಿಕೆ ನಿಯಂತ್ರಿಸಬೇಕು. ಹೊಸ ಉದ್ಯೋಗಗಳ ಸೃಷ್ಟಿ ಹಾಗೂ ಹಾಲಿ ಉದ್ಯೋಗಗಳ ಭದ್ರತೆಗೆ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ಎಲ್ಲಾ ಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆಯನ್ನು ಒದಗಿಸಬೇಕು ಹಾಗೂ ರಾಷ್ಟ್ರೀಯ ಸಾಮಾಜಿಕ ಭದ್ರತಾ ನಿಧಿ ಸ್ಥಾಪನೆ ಮಾಡಬೇಕು. ಕೇಂದ್ರ ಹಾಗೂ ರಾಜ್ಯಗಳ ಸಾರ್ವಜನಿಕ ಉದ್ದಿಮೆಗಳ ಷೇರು ಮಾರಾಟ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಖಾಯಂ ಹಾಗೂ ನಿರಂತರ ಸ್ವರೂಪದ ಉದ್ಯೋಗದ ಹೊರ ಗುತ್ತಿಗೆಯನ್ನು ನಿಷೇಧಿಸಬೇಕು. ಖಾಯಂ ಉದ್ಯೋಗಿಗಳಿಗೆ ನೀಡಲಾಗುತ್ತಿರುವ ವೇತನ ಹಾಗೂ ಸೌಲಭ್ಯಗಳನ್ನು ಗುತ್ತಿಗೆ ಕಾರ್ಮಿಕರಿಗೂ ನೀಡಬೇಕು. ಕನಿಷ್ಟ ಕೂಲಿ ಕಾಯ್ದೆಗೆ ಸೂಕ್ತ ತಿದ್ದುಪಡಿ ತಂದು ಬೆಲೆ ಸೂಚ್ಯಂಕ ಆಧಾರಿತವಾದ ಮಾಸಿಕ ಕನಿಷ್ಟ 10 ಸಾವಿರ ಕೂಲಿಯನ್ನು ಸಾರ್ವತ್ರಿಕವಾಗಿ ನಿಗದಿಪಡಿಸಬೇಕು. ಬೋನಸ್ ಪಾವತಿ, ಭವಿಷ್ಯ ನಿಧಿ ಇತ್ಯಾಧಿಗಳಿಗೆ ಹಾಲಿ ಇರುವ ಎಲ್ಲಾ ನಿರ್ಬಂಧ, ಮಿತಿಗಳನ್ನು ತೊಡೆದು ಹಾಕಿ, ಗ್ರಾಚ್ಯುಯಿಟಿ ಮೊತ್ತವನ್ನು ಏರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘದ ಕಾರ್ಯದರ್ಶಿ ಕೆ.ಆರ್. ಕೃಷ್ಣಮೂರ್ತಿ, ಕಾವೇರಿ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಸಿ.ಎಂ. ಉಮಾಪತಿ, ಎಸ್ಬಿಎಂನ ರಮೇಶ್, ಕೆನರಾ ಬ್ಯಾಂಕಿನ ಸತ್ಯನಾರಾಯಣಸ್ವಾಮಿ ಹಾಗೂ ವಿವಿಧ ಬ್ಯಾಂಕ್ಗಳ ಅಧಿಕಾರಿಗಳು, ನೌಕರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

