ಚಿಕ್ಕಮಗಳೂರು

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ: ಮನವಿ

Published On :

ತರೀಕೆರೆ: ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್ ಹೇಳಿದರು.
ಅವರು ಇತ್ತೀಚೆಗೆ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಎಂ.ಜಿ. ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಪಕ್ಷದ ಟಿಕೇಟು ಆಕಾಂಕ್ಷಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾಜಿ ಶಾಸಕ ಬಿ.ಆರ್. ನೀಲಕಂಠಪ್ಪ ಮಾತನಾಡಿ, ಚುನಾವಣೆಯಲ್ಲಿ ಪಕ್ಷದ ಗೆಲವು ಶತಃಸಿದ್ದವಾಗಿದೆ ಎಂದು ತಿಳಿಸಿದರು. ಕೆಪಿಪಿಸಿ ಸದಸ್ಯ ಟಿ.ವಿ. ಶಿವಶಂಕರಪ್ಪ ಮಾತನಾಡಿ, ನೀವೆಲ್ಲ ಇದ್ದರೆ ಮಾತ್ರ ಕಾಂಗ್ರೆಸ್ ಪಕ್ಷ. ವಾರ್ಡ್‌ವೈಸ್ ಕಾರ್ಯಕರ್ತರ ಅಭಿಪ್ರಾಯ ಮತ್ತು ಅಹವಾಲು ಸ್ವೀಕರಿಸಿ, ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಿ.ಎಚ್. ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಹೆಚ್ಚಿನ ಆಕಾಂಕ್ಷಿಗಳು ಬಂದಿದ್ದಾರೆ. 23 ಅಭ್ಯರ್ಥಿಗಳಿಗೆ ಮಾತ್ರ ಪಕ್ಷ ಅವಕಾಶ ಕಲ್ಪಿಸಬಹುದು. ಪಕ್ಷ ಖಂಡಿತ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎಸ್.ಎಂ. ನಾಗರಾಜ್, ಟಿ.ಎಚ್. ಶಿವಶಂಕರಪ್ಪ, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್. ಧೃವಕುಮಾರ್, ಜಿಪಂ ಮಾಜಿ ಅಧ್ಯಕ್ಷ ಎಸ್. ತಿಪ್ಪೇರುದ್ರಯ್ಯ, ರಾಮಪ್ಪ, ಟಿ.ಎಚ್. ಲಕ್ಷ್ಮೀನಾರಾಯಣ್, ಎಚ್. ಓಂಕಾರಪ್ಪ, ಟಿ.ಎನ್. ಗೋಪಿನಾಥ್ ದೋರನಾಳು ಪರಮೇಶ್, ಹೇಮಲತಾ ರೇವಣ್ಣ, ಟಿ.ಆರ್. ಬಸವರಾಜ್ ಮೊದಲಾದ ಮುಖಂಡರು ಮಾತನಾಡಿದರು. ಟಿ.ಆರ್. ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.