ಚಿಕ್ಕಮಗಳೂರು

ವಿವೇಕಾನಂದ ಜಯಂತಿ ಅಂಗವಾಗಿ ರಕ್ತದಾನ ಶಿಬಿರ

Published On :

ಮೂಡಿಗೆರೆ: ವಿಶ್ವ ಹಿಂದೂ ಪರಿಷತ್, ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ವಿವೇಕ  ಜಾಗೃತ ಬಳಗ, ಜೆಸಿಐ ಸಂಸ್ಥೆ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮತ್ತು ಪತಂಜಲಿ ಯೋಗ ಸಮಿತಿಯಿಂದ ಶುಕ್ರವಾರ ಡಿಎಸ್‌ಬಿಜಿ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನೋತ್ಸವ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು.
     ಈ ವೇಳೆ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಉಪಾಧ್ಯಕ್ಷ ಮನಮೋಹನ್ ಮಾತನಾಡಿ, ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಡಿಎಸ್‌ಬಿಜಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಬೆಂಗಳೂರು ರೆಡ್‌ಕ್ರಾಸಿನ 10 ಮಂದಿ ವೈದ್ಯರ ತಂಡ ಆಗಮಿಸಿದೆ.
   ಶಿಬಿರದಲ್ಲಿ 90 ವಿದ್ಯಾರ್ಥಿಗಳು ಹಾಗೂ 61 ಮಂದಿ ಸಾರ್ವಜನಿಕರು ಒಟ್ಟು 151 ಮಂದಿ ರಕ್ತದಾನ ನೀಡಿದ್ದಾರೆ. ರಕ್ತದಾನ ನೀಡಿದವರೆಲ್ಲರಿಗೂ ಫೆ.24ರಂದು ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆಯುವ ಜಾಗೋ ಭಾರತ್ ಕಾರ್ಯಕ್ರಮದ ಪಾಸ್ ಅನ್ನು ಉಚಿತವಾಗಿ ನೀಡಲಾಗಿದೆ ಎಂದು ತಿಳಿಸಿದರು.
ಈ ವೇಳೆ ರಾಜ್ಯ ಅರಣ್ಯ ವಸತಿ ಮತ್ತು ವಿಹಾರಧಾಮ ನಿಗಮದ ಅಧ್ಯಕ್ಷ ಎಂ.ಕೆ. ಪ್ರಾಣೇಶ್, ವಿಶ್ವ ಹಿಂದೂ  ಪರಿಷತ್ತಿನ ಅಧ್ಯಕ್ಷ ಪ್ರತಾಪ್, ಮೂಡಿಗೆರೆ ಜೇಸಿಐ ಸಂಸ್ಥೆ ಅಧ್ಯಕ್ಷ ಪ್ರಸನ್ನ ಗೌಡಹಳ್ಳಿ, ಬಣಕಲ್ ವಿಸ್ಮಯ ಜೆಸಿಐ ಅಧ್ಯಕ್ಷ ಹರ್ಷಕುಮಾರ್, ವಿವೇಕ ಜಾಗೃತ ಬಳಗದ ರಮೇಶ್, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಪ್ರಮುಖ್ ಧನಿಕ್, ಡಿಎಸ್‌ಬಿಜಿ ಕಾಲೇಜಿನ ಪ್ರಾಂಶುಪಾಲ ದೊಡ್ಡಯ್ಯ, ಆಡಳಿತ ಮಂಡಳಿಯ  ಜೆ.ಎಸ್. ರಘು ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.