ಚುನಾವಣೆ: ನೋಡಲ್ ಅಧಿಕಾರಿ ನೇಮಕ
ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯ ಸಂಬಂಧ ಕೆಳಕಂಡ ಅಧಿಕಾರಿಗಳನ್ನು ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಗೆ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಚಿಕ್ಕಮಗಳೂರು ನಗರಸಭೆ- ಡಾ. ಆರ್. ಪ್ರಶಾಂತ್, ಉಪ ವಿಭಾಗಾಧಿಕಾರಿ, ಚಿಕ್ಕಮಗಳೂರು (9743351379), ತರೀಕೆರೆ ಪುರಸಭೆ- ಜಿ. ಅನುರಾಧ, ಉಪ ವಿಭಾಗಾಧಿಕಾರಿ, ತರೀಕೆರೆ, (9844488360), ಕಡೂರು ಪುರಸಭೆ - ಲಕ್ಷ್ಮೀನರಸಿಂಹಯ್ಯ, ಉಪ ಕಾರ್ಯದರ್ಶಿ 1 ಜಿಲ್ಲಾ ಪಂಚಾಯತ್, ಚಿಕ್ಕಮಗಳೂರು (9480860001), ಬೀರೂರು ಪುರಸಭೆ - ಯಾಲಕ್ಕಿಗೌಡ, ಉಪ ಕಾರ್ಯದರ್ಶಿ 2, ಜಿಲ್ಲಾ ಪಂಚಾಯತ್, ಚಿಕ್ಕಮಗಳೂರು (9480860007), ಮೂಡಿಗೆರೆ ಪಟ್ಟಣ ಪಂಚಾಯಿತಿ- ಬಿ.ಆರ್. ರೂಪ, ಜಿಲ್ಲಾ ಮ್ಯಾನೇಜರ್ ಕೆ.ಎಫ್.ಸಿ.ಎಸ್. ಚಿಕ್ಕಮಗಳೂರು (9448263897), ಕೊಪ್ಪ ಪಟ್ಟಣ ಪಂಚಾಯಿತಿ- ರತ್ನಾಕರ ನಾಯಕ್, ಉಪ ನಿರ್ದೇಶಕರು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಚಿಕ್ಕಮಗಳೂರು (9448344573), ಶೃಂಗೇರಿ ಪಟ್ಟಣ ಪಂಚಾಯಿತಿ- ಸುರೇಶ್, ಸಹಾಯಕ ನಿರ್ದೇಶಕರು, ನಗರ ಯೋಜನಾ ಇಲಾಖೆ, ಚಿಕ್ಕಮಗಳೂರು (9448248387), ನರಸಿಂಹರಾಜಪುರ ಪಟ್ಟಣ ಪಂಚಾಯಿತಿ- ಶಶಿಧರ್, ಉಪ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್. ಚಿಕ್ಕಮಗಳೂರು (9449863045).
ಚುನಾವಣಾ ವೀಕ್ಷಕರ ನೇಮಕ: ಚಿಕ್ಕಮಗಳೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆ ಸಂಬಂಧ ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಕಾರ್ಯ ನಿರ್ವಹಣಾಧಿಕಾರಿ ಎ.ಬಿ. ಇಬ್ರಾಹಿಂ ಅವರನ್ನು ಚಿಕ್ಕಮಗಳೂರು ನಗರಸಭೆ, ಕೊಪ್ಪ, ಶೃಂಗೇರಿ ಮತ್ತು ಮೂಡಿಗೆರೆ ಪಟ್ಟಣ ಪಂಚಾಯಿತಿಗಳಿಗೆ ಹಾಗೂ ಬೆಂಗಳೂರು ಜಲ ಮಂಡಳಿ ಮುಖ್ಯ ಆಡಳಿತಾಧಿಕಾರಿ ಕೆ.ಎಸ್. ಮಂಜುನಾಥ್ ಅವರನ್ನು ತರೀಕೆರೆ, ಬೀರೂರು, ಕಡೂರು ಪುರಸಭೆ ಹಾಗೂ ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಚುನಾವಣೆಗೆ ವೀಕ್ಷಕರನ್ನಾಗಿ ರಾಜ್ಯ ಚುನಾವಣಾ ಆಯೋಗ ನೇಮಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

