ಚಿಕ್ಕಮಗಳೂರು

ಪರಿಚಯಸ್ಥರಿಂದಲೇ ದೌರ್ಜನ್ಯ: ಆತಂಕ

Published On :

ಮೂಡಿಗೆರೆ: ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲೆ  ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಿನವು ಪರಿಚಯಸ್ಥರಿಂದಲೇ ಜರುಗುತ್ತಿದೆ. ಹಿತಶತ್ರುಗಳ ಬಗ್ಗೆ ಮಹಿಳೆಯರು ಮತ್ತು ಮಕ್ಕಳು ಎಚ್ಚರವಹಿಸಬೇಕಾದ ಅವಶ್ಯಕತೆ ಇದೆ ಎಂದು ಪ್ರಧಾನ ಸಿವಿಲ್‌ನ್ಯಾಯಾಧೀಶರಾದ ಪದ್ಮಪ್ರಸಾದ್ ಅಭಿಪ್ರಾಯಪಟ್ಟರು.
 ತಾಪಂ ಸಭಾಂಗಣದಲ್ಲಿ ತಾಲೂಕಿನ ಕಾನೂನು ಸೇವಾ ಸಮಿತಿ, ಜಿಲ್ಲಾಮಕ್ಕಳ ರಕ್ಷಣಾ ಘಟಕ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿ, ಹಲವು ಮಕ್ಕಳು ತಂದೆ-ತಾಯಿಯರ ಪ್ರೀತಿಯಿಂದ ವಂಚಿತರಾಗಿ ಬೇರಡೆ ಪ್ರೀತಿಯನ್ನು ಅರಸುತ್ತಾರೆ. ಇದೇ ಸಂದರ್ಭವನ್ನು ಕೆಲವು ದುಷ್ಟರು ದುರುಪಯೋಗ ಪಡೆಸಿಕೊಳ್ಳುತ್ತಾರೆ ಎಂಬುವುದನ್ನು ಪೋಷಕರು ಅರಿಯ ಬೇಕು ಹಾಗೂ ಮಕ್ಕಳ ಚಲನವಲನದ ಬಗ್ಗೆ ನಿಗಾವಹಿಸಬೇಕು ಎಂದರು.
 ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್. ಕೋಮರಯ್ಯ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ತಡೆಗೆ ಹಲವು ಕಾನೂನುಗಳು ಜಾರಿಯಲ್ಲಿದ್ದರೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು  ವಿಪರ್ಯಾಸದ ಸಂಗತಿಯಾಗಿದೆ ಎಂದು ಹೇಳಿದರು. ಕಾರ್ಯಗಾರದ ಅಧ್ಯಕ್ಷತೆಯನ್ನು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಚೆನ್ನ ಬಸಪ್ಪ ಮೇಕಾಲೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಉಮೇಶ್, ಕಾರ್ಯದರ್ಶಿ ಬಿ.ಟಿ. ನಟರಾಜ್ ಇದ್ದರು.
 ವಕೀಲ ಕೆ.ಎಂ. ಪ್ರಶಾಂತ್, ಮಕ್ಕಳ ರಕ್ಷಣಾಧಿಕಾರಿ ರಂಗನಾಥ್, ರಜನಿ ಎಚ್.ಎಸ್, ಮಧು ಕೆ.ಸಿ, ಡಿ.ಸಿ.ನಾಗರಾಜ್, ಜಯಶೀಲಾ ಕೆ.ಆರ್ ಉಪನ್ಯಾಸ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.